ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆ

ಶಿರಸಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಎಮ್ಇಎಸ್ ವಾಣಿಜ್ಯ ಮಹಾವಿದ್ಯಾಲಯ ಹಾಗು ಶ್ರೀ ಸ್ವಯಂ ಸೇವಾ ಸಂಸ್ಥೆಯ ಸಹಯೋಗದಲ್ಲಿ ಇಂದು ವಿದ್ಯಾರ್ಥಿನಿಯರಿಗಾಗಿ ಮೆಹಂದಿ, ರಂಗೋಲಿ ಹಾಗು ಭಾವಗೀತೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿರಸಿ ಲಯನ್ಸ್ ಕ್ಲಬ್ ಅಧ್ಯಕ್ಷೆ ರಮಾ ಪಟವರ್ಧನ, ಇಂದಿನ ಆಧುನಿಕ ಯುಗದಲ್ಲಿ ಮಹಿಳೆ ಪುರುಷನಿಗೆ ಎಲ್ಲ ವಿಧದಲ್ಲಿಯೂ ಸಮನಾಗಿದ್ದಾಳೆ. ನಾವು ಬೇರೆಯವರನ್ನು ಅನುಕರಣೆ ಮಾಡುವ ಬದಲು ನಾವು ನಾವಾಗಿರಬೇಕು. ನಮ್ಮಲ್ಲಿ ಸ್ವಂತಿಕೆ ಹೆಚ್ಚಾಗಬೇಕು. ಎಲ್ಲರೊಡನೆ ಜೊತೆಗೂಡಿ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಯೋಚಿಸಬೇಕಿದೆ ಎಂದರು.


ಶ್ರೀ ಸ್ವಯಂ ಸೇವಾ ಸಂಸ್ಥೆಯ ಅಮೋದ ಸಿರ್ಸಿಕರ್ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಲಯದ ಪ್ರಾಂಶುಪಾಲರಾದ ರವಿ ನಾಯಕ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾಲಯದ ಪ್ರಾಧ್ಯಾಪಕ ರಜನೀಶ ಸಮಸಗೀಕರ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.