ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಾರ್ಷಿಕ ಆರೋಗ್ಯ ತಪಾಸಣಾ ಶಿಬಿರ

ಶಿರಸಿ: ನಗರದ ಎಮ್ ಎಮ್ ಮಹಾವಿದ್ಯಾಲಯದ ಇಂಡಿಯನ್ ಯುಥ್ ರೆಡ್ ಕ್ರಾಸ್ ವಿಂಗ್ ವತಿಯಿಂದ ಇಂದು ಮಹಾವಿದ್ಯಾಲಯದಲ್ಲಿ ವಾರ್ಷಿಕ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿದ್ಯಾಲಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. ಈ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ಸಂಘ ಶಿರಸಿ ಶಾಖೆಯ ಅಧ್ಯಕ್ಷ ಕೈಲಾಷ್ ಪೈ, ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎ ಕೆ ಕಿಣಿ ಉಪಸ್ಥಿತರಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.