ಕೆ ಎಸ್ ಹೆಗಡೆ ಆಸ್ಪತ್ರೆಯ ಮಾಹಿತಿ ಕೇಂದ್ರ ಶಿರಸಿಯಲ್ಲಿ ಏ.15ಕ್ಕೆ ಉದ್ಘಾಟನೆ

ಶಿರಸಿ: ಕದಂಬ ಸಂಸ್ಥೆಯು ಕಳೆದ 12 ವರ್ಷಗಳಿಂದ ರಿಯಾಯಿತಿ ಹಾಗೂ ಉತ್ತಮ ಚಿಕಿತ್ಸೆಗಳನ್ನು ನೀಡುವ ಒಪ್ಪಂದದ ಮೇರೆಗೆ ಅನೇಕ ರೋಗಿಗಳನ್ನು ಕೆ.ಎಸ್.ಹೆಗಡೆ ಆಸ್ಪತ್ರೆಗೆ ಕಳುಹಿಸಿಲಾಗುತ್ತಿದ್ದು, ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರವಾಗಿದೆ. ಈ ಹಿನ್ನಲೆಯಲ್ಲಿ ಕೆ.ಎಸ್.ಹೆಗಡೆ ಆಸ್ಪತ್ರೆಯ ಮಾಹಿತಿ ಕೇಂದ್ರವು ಶಿರಸಿಯಲ್ಲಿ ಏ. 15 ರಿಂದ ಪ್ರಾರಂಭವಾಗುತ್ತಿದೆ ಎಂದು ಕದಂಬ ಫೌಂಡೇಶನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಸಂಸದ ಅನಂತಕುಮಾರ ಹೆಗಡೆ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೆ.ಎಸ್.ಹೆಗಡೆ ಮೆಡಿಕಲ್ ಅಕಾಡೆಮಿಯ ಡೀನ್ ಸತೀಶಕುಮಾರ ಬಂಡಾರಿ ವಹಿಸಲಿದ್ದು, ಕೆ.ಎಸ್.ಹೆಗಡೆ ಆಸ್ಪತ್ರೆಯ ಮೆಡಿಕಲ್ ಸೂಪೆರಿಡೆಂಟ್ ಶಿವಕುಮಾರ ಹೀರೆಮಠ, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ಟಿ.ನಾಯ್ಕ ಹಾಗೂ ಶಿಕ್ಷಣ ಪ್ರಸಾರಕ ಸಂಸ್ಥೆಯ ಉಪಾಧ್ಯಕ್ಷರಾದ ಶಶಿಭೂಷಣ ಹೆಗಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮೊದಲು ಅನೇಕ ಬಡ ಜನರು ಉಚಿತವಾಗಿ ಚಿಕಿತ್ಸೆಯನ್ನು ಪಡೆದು ಸಂಪೂರ್ಣ ಗುಣಮುಖರಾಗಿ ಬಂದಿರುತ್ತಾರೆ. ಕೆಲವು ಅನಗತ್ಯ ಶಸ್ತ್ರಚಿಕಿತ್ಸೆ ಆಗುವಂತಹ ಪ್ರಕರಣಗಳನ್ನು ಕೇವಲ ಔಷಧಗಳಿಂದಲೇ ಗುಣಮುಖ ಪಡಿಸುವುದರಿಂದಲೇ ಆಸ್ಪತ್ರೆಯು ಸಾರ್ವಜನಿಕರ ವಿಶ್ವಾಸಗಳಿಸಿದೆ. ಇಂದಿನ ದುಬಾರಿ ಯುಗದಲ್ಲಿ ಅತೀ ಕಡಿಮೆ ದರದಲ್ಲಿ ಔಷಧೋಪಚಾರ ಒದಗಿಸುತ್ತಿರುವ ಘಟ್ಟದ ಮೇಲಿನ ತಾಲೂಕಿನ ರೋಗಿಗಳಿಗೆ ತುಂಬಾ ಅನುಕೂಲವಾಗಲಿದೆ.
ರಾಜ್ಯ ಸರ್ಕಾರದ ವಿವಿಧ ಯೋಜನೆಗಳು, ಲಭ್ಯವಿರುವ ವೈದ್ಯರ ಮಾಹಿತಿ, ಸರ್ಕಾರಿ ಹಾಗೂ ಖಾಸಗೀ ವಿಮಾ ಯೋಜನೆಗಳು, ಬಡವರಿಗಾಗಿ ಉಚಿತ ಚಿಕಿತ್ಸೆ ಮುಂತಾದವುಗಳ ಬಗ್ಗೆ ಸಮಗ್ರ ಮಾಹಿತಿಯನ್ನು ರೋಗಿಗಳಿಗೆ ನೀಡುವ ಉದ್ದೇಶದಿಂದಾಗಿ ಮಾಹಿತಿ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.