ಮುಂಗಾರಿನ ಸ್ವಾಗತಕ್ಕೆ ಚರಂಡಿ ಸ್ವಚ್ಛಗೊಳಿಸುವಂತೆ ಜಿಲ್ಲಾಧಿಕಾರಿಯಿಂದ ಖಡಕ್ ಆದೇಶ.

ಕಾರವಾರ: ಮುಂಗಾರು ಮಳೆ ಆರಂಭಕ್ಕೂ ಮೊದಲು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಚರಂಡಿಗಳನ್ನು ಸ್ವಚ್ಛಗೊಳಿಸಲು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚನೆ ನೀಡಿದರು.

ಶನಿವಾರ ಜಿಲ್ಲೆಯ ಎಲ್ಲಾ ಪೌರಾಯಕ್ತರ ಹಾಗೂ ಮುಖ್ಯಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತನಾಡಿ, ಮೇ 25-27ರ ವರೆಗೆ ಏಕಕಾಲದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಚರಂಡಿ ಸ್ವಚ್ಛಗೊಳಿಸುವುದನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಈ ವೇಳೆ ಸೂಚನೆ ನೀಡಿದರು.
ಈ ಕಾರ್ಯದ ಮೇಲುಸ್ತುವಾರಿ ವಹಿಸಲು ತಾಲೂಕಾ ವಾರು ಜಿಲ್ಲಾಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮಳೆಗಾಲದಲ್ಲಿ ಚರಂಡಿ ಸ್ವಚ್ಛಗೊಳಿಸದೇ ನೀರಿನಿಂದ ಅನಾಹುತವಾದರೆ ಸಂಬಂಧ ಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಜವಾಬ್ದಾರಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

Categories: ಜಿಲ್ಲಾ ಸುದ್ದಿ

Leave A Reply

Your email address will not be published.