ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಸಂಪನ್ನ

ಶಿರಸಿ: ರಾಘವೇಂದ್ರ ಸ್ವಾಮಿಗಳ 346ನೇ ಆರಾಧನಾ ಮಹೋತ್ಸವ ಇಲ್ಲಿನ ರಾಯರಮಠದಲ್ಲಿ ಆ.8ರಿಂದ ಆರಂಭವಾಗಿದ್ದು, ಬುಧವಾರ ಪವಮಾನ ಯಾಗ ಸಂಪನ್ನಗೊಂಡಿತು. 6 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಂಡು ಅನ್ನ ಪ್ರಸಾದ ಸ್ವೀಕರಿಸಿ ರಾಯರ ಅನುಗ್ರಹಕ್ಕೆ ಪಾತ್ರರಾದರು. ಮುಂಜಾನೆ ವೇದಘೋಷ, ಅಷ್ಟೋತ್ತರ, ಪವಮಾನಸೂಕ್ತ ಪಠಣ, ಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ತುಳಸಿ ಅರ್ಚನೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ನಂತರ ಪವಮಾನ ಯಾಗ ವೈದಿಕರ ನೇತೃತ್ವದಲ್ಲಿ ನಡೆಯಿತು. ನಂತರ ನಡೆದ ಅನ್ನ ದಾಸೋಹದಲ್ಲಿ 6 ಸಾವಿರಕ್ಕೂ ಅಧಿಕ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಸಂಜೆ ಲಯನೆಸ್ ಕ್ಲಬ್, ದೈವಜ್ಞ ಮಹಿಳಾ ಮಂಡಳದ ವತಿಯಿಂದ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ವೇಳೆ ರಾಘವೇಂದ್ರ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.