ರಸ್ತೆ ಅಪಘಾತದಲ್ಲಿ ಐವರ ದುರ್ಮರಣ, ನಾಲ್ವರಿಗೆ ಗಂಭೀರ ಗಾಯ

ಅಂಕೋಲ: ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದು ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ತಾಲೂಕಿನ ಹೊನ್ನಳ್ಳಿ ಸಮೀಪ ಬುಧವಾರ ರಾತ್ರಿ 10.30ರ ಸುಮಾರಿಗೆ ನಡೆದಿದೆ.

ಕಾರಿನಲ್ಲಿದ್ದವರನ್ನು ವಿಜಯಪುರ ಜಿಲ್ಲೆಯ ಜಮನಾಳ ನಿವಾಸಿಗಳೆಂದು ಗುರುತಿಸಿದ್ದು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಇಬ್ಬರು ಮಕ್ಕಳು, ಇಬ್ಬರು ಪುರುಷರು, ಓರ್ವ ಮಹಿಳೆ ಸೇರಿ ಐವರು ಮೃತ ಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಮೂವರ ಗುರುತು ಪತ್ತೆಯಾಗಿದ್ದು ದಾನಪ್ಪ ರುದ್ರಪ್ಪ ಕೋರಿ, ಆದಿತ್ಯ ದಾನಪ್ಪ ಕೋರಿ, ಮತ್ತು ರಾಜಗೋಪಾಲ ಪಾಟೀಲ್ ಎನ್ನಲಾಗಿದೆ.
ಸ್ಥಳಕ್ಕೆ ಅಂಕೋಲಾ ಪಿಎಸ್ ಐ ಬಸಪ್ಪ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.