ಬಿಗಿ ಪೊಲೀಸ್ ಭದ್ರತೆಯಲ್ಲಿ ನಡೆದ ಟಿಪ್ಪು ಜಯಂತಿ

 

ಶಿರಸಿ : ರಾಜ್ಯದಾದ್ಯಂತ ವಿರೋಧವಾಗುತ್ತಿದ್ದರೂ ಸಹ ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಣೆ ಮಾಡಿದ್ದು, ಶಿರಸಿಯಲ್ಲಿ ನೂರಾರು ಪೊಲೀಸರ ಸಮ್ಮುಖದಲ್ಲಿ ಬಿಗಿ ಭದ್ರತೆಲ್ಲಿ ಜಯಂತಿಯು ಜರುಗಿತು.

ಕಾರ್ಯಕ್ರಮವನ್ನು ಸಹಾಯಕ ಆಯುಕ್ತ ರಾಜು ಮೊಗವೀರ ಉದ್ಘಾಟಿಸಿದರು. ತಾ.ಪಂ.ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಅಧ್ಯಕ್ಷತೆಯನ್ನು ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಅರುಣಾ ವೆರ್ಣೇಕರ, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ದೊಡ್ಮನಿ ಮುಂತಾದವರು ಇದ್ದರು.

ಸಭಾ ಕಾರ್ಯಕ್ರಮದ ಸಂದರ್ಭದಲ್ಲಿ ಬಿಜೆಪಿ ತಾಲೂಕಾ ಘಟಕದ ವತಿಯಿಂದ ಟಿಪ್ಪು ಜಯಂತಿಯನ್ನು ವಿರೋಧಿಸಿ ಘೊಷಣೆ ಕೂಗಲಾಯಿತು. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು. ಪ್ರತಿಭಟನೆಯಲ್ಲಿ ಪ್ರಮುಖರಾದ ಗಣಪತಿ ನಾಯ್ಕ, ಚಂದ್ರು ಎಸಳೆ, ವೀಣಾ ಶೆಟ್ಟಿ, ರಾಜು ಶೆಟ್ಟಿ, ವಿಶಾಲ್ ಮರಾಠೆ ಮುಂತಾದವರು ಭಾಗವಹಿಸಿದ್ದರು.

ಟಿಪ್ಪು ಜಯಂತಿಯನ್ನು ವಿರೋಧಿಸಿದ ಕಾರಣ ಮುಸ್ಲಿಂ ಸಮಾಜದವರು ಪ್ರತಿರೋಧವನ್ನು ವ್ಯಕ್ತಪಡಿಸಿ ಟಿಪ್ಪುವಿಗೆ ಜಯಕಾರವನ್ನು ಕೂಗಿದರು. ತಾಲೂಕಾ ಆಡಳಿತ, ತಾಲೂಕಾ ಪಂಚಾಯತ ಹಾಗೂ ನಗರಸಭೆ ಸಂಯುಕ್ತ ಆಶ್ರಯದಲ್ಲಿ ಜಯಂತಿಯನ್ನು ಆಚರಣೆ ಮಾಡಲಾಯಿತು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.