ಶಿರಸಿ : ಸ್ವರ್ಣವಲ್ಲಿ ಕೃಷಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾಗಿ ಆರ್.ಎನ್.ಹೆಗಡೆ ಉಳ್ಳಿಕೊಪ್ಪ ಹಾಗೂ ಕಾರ್ಯದರ್ಶಿಯಾಗಿ ಸುರೇಶ್ ಹೆಗಡೆ ಹಕ್ಕೀಮನೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಪ್ರತಿಷ್ಠಾನದ ಅಧ್ಯಕ್ಷರೂ ಆಗಿರುವ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ಮಾಮಿಜಿಗಳ ದಿವ್ಯ ಸಾನ್ನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದು ಸಹ ಕಾರ್ಯದರ್ಶಿ ಯಾಗಿ ಎನ್.ವಿ.ಹೆಗಡೆ ಮತ್ತೀಹಳ್ಳಿ ಅವರನ್ನು ನೇಮಕ ಮಾಡಲಾಗಿದೆ. ಪ್ರತಿಷ್ಠಾನದ ನಿಕಟಪೂರ್ವ ಕಾರ್ಯಾಧ್ಯಕ್ಷ ಶಂಕರ ಹೆಗಡೆ ಮಾಳೇನಳ್ಳಿ ಸೂಚಿಸಿದರೆ ವಿಶ್ವಸ್ಥ ಡಾ.ಜಿ.ವಿ.ಹೆಗಡೆ ಹುಳಗೋಳ ಅನುಮೋದಿಸಿದರು.