ಆದ್ಯತೆಗಳಿಗನುಗುಣವಾಗಿ ಕರ್ತವ್ಯವನ್ನು ಮಾಡುತ್ತೇವೆ: ಶಿವರಾಮ ಹೆಬ್ಬಾರ

 

ಯಲ್ಲಾಪುರ: ಅವಶ್ಯಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಹೊಣೆಯಾಗಿದ್ದು, ಇದನ್ನು ಗಮನದಲ್ಲಿರಿಸಿಕೊಂಡು ಕಾಲಕಾಲಕ್ಕೆ, ಆದ್ಯತೆಗಳಿಗನುಗುಣವಾಗಿ ಕರ್ತವ್ಯವನ್ನು ಮಾಡುತ್ತೇವೆ. ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಅವರು ತಾಲೂಕಿನ ಉಮ್ಮಚಗಿಯಲ್ಲಿ ಪಶು ವೈದ್ಯಕೀಯ ಇಲಾಖೆ ಹಾಗೂ ಜಿಲ್ಲಾಡಳಿತಗಳ ಆಶ್ರಯದಲ್ಲಿ 30.40 ಲಕ್ಷ ರೂಗಳ ವೆಚ್ಚದಲ್ಲಿ ಆರ್.ಐ.ಡಿ.ಎಫ್ ಯೋಜನೆಯಡಿ ನಿರ್ಮಿಸಲಾಗುವ ಪಶು ಚಿಕಿತ್ಸಾಲಯ ಕಟ್ಟಡದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಪ್ರಾಮುಖ್ಯತೆ ಪಡೆದುಕೊಳ್ಳುತ್ತಿರುವ ಪಶುಸಂಗೋಪನೆಗೆ ಸರ್ಕಾರ ಆದ್ಯತೆ ನೀಡುತ್ತಿದ್ದು, ಪಶುಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ದೇಶದ ಅನ್ನದಾತರಾಗಿರುವ ಕೃಷಿ ಮತ್ತು ಕೃಷಿ ಕಾರ್ಮಿಕರು ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಅನ್ನದಾತರ ನೆಮ್ಮದಿ ಸರ್ಕಾರದ ಮಹತ್ವಾಕಾಂಕ್ಷೆಯಾಗಿದೆ. ಎಂದರು.
ತಾ.ಪಂ ಅಧ್ಯಕ್ಷೆ ಭವ್ಯಾ ಶೆಟ್ಟಿ, ಗ್ರಾ.ಪಂ ಅಧ್ಯಕ್ಷ ಗ.ರಾ.ಭಟ್ಟ, ಪ್ರಮುಖರಾದ ಎಂ.ಆರ್.ಹೆಗಡೆ, ಎ.ಪಿಎಂ.ಸಿ ಅಧ್ಯಕ್ಷ ಎಂ.ಜಿ.ಭಟ್ಟ, ಜಿ.ಪಂ ಮಾಜಿ ಸದಸ್ಯೆ ವರದಾ ಹೆಗಡೆ, ತಾ.ಪಂ ಸದಸ್ಯೆ ರಾಧಾ ಹೆಗಡೆ, ಗ್ರಾ.ಪಂ ಸದಸ್ಯರಾದ ರೇಣುಕಾ ನಾಯ್ಕ, ಮಹಾಲಕ್ಷ್ಮೀ ನಾಯ್ಕ, ಅನಸೂಯಾ ಹೆಗಡೆ, ತಿಮ್ಮವ್ವ ಬಸಾಪುರ, ಗ್ರಾ.ಪಂ ಮಾಜಿ ಅಧ್ಯಕ್ಷ ಕುಪ್ಪಯ್ಯ ಶೇರೂಗಾರ ಉಪಸ್ಥಿತರಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.