ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿ ಆಹ್ವಾನ

ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರೀಯಾಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿ ಆಹ್ವಾನಿಸಿದೆ.
ಕನಿಷ್ಠ 5 ರಿಂದ 15 ಜನ ವಿದ್ಯಾರ್ಥಿಗಳನ್ನೊಳಗೊಂಡಂತೆ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಿಕೊಂಡು, ಆಯ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬೇಕು. ನಂತರ ಕಾಲೇಜಿನಲ್ಲಿ ಸಾಹಿತ್ಯಿಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ವರ್ಷಕ್ಕೆ ನಾಲ್ಕು ಕಾರ್ಯಕ್ರಮ ಆಯೋಜಿಸಬೇಕು. ಅದಕ್ಕೆ ಪ್ರಾಧಿಕಾರವು 5 ಸಾವಿರ ರೂ. ವೆಚ್ಚ ಬರಿಸಲಿದೆ.
ಅರ್ಜಿ ಸಲ್ಲಿಸಲು 2018 ಜನೇವರಿ 20 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿ ಅಥವಾ ದೂರವಾಣಿ ಸಂಖ್ಯೆ 080-22107704, 2248516 ಅಥವಾ ಪ್ರಾಧಿಕಾರದ ವೆಬ್‍ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom sಸಂಪರ್ಕಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಆಡಳಿತಾಧಿಕಾರಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ ಬೆಮಗಳೂರು-01 ಇಲ್ಲಿಗೆ ಕಳುಹಿಸಬೇಕು

Categories: ಜಿಲ್ಲಾ ಸುದ್ದಿ

Leave A Reply

Your email address will not be published.