ಭೈರುಂಬೆ ಬಳಿ ಕಾರು- ಬೈಕ್ ಮುಖಾಮುಖಿ ಡಿಕ್ಕಿ: ವಿದ್ಯಾರ್ಥಿ ಸಾವು

ಶಿರಸಿ: ಕಾರು- ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಭೈರುಂಬೆ ಬಳಿ ಗುರುವಾರ ತಡರಾತ್ರಿ ನಡೆದಿದೆ.

ಶ್ರೀಮುಖ ನರಸಿಂಹ ಹೆಗಡೆ (20) ಮೃತ ಪಟ್ಟ ವಿದ್ಯಾರ್ಥಿಯಾಗಿದ್ದು, ಈತ ಎಮ್.ಇ.ಎಸ್. ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಕಾಮ್ ವ್ಯಾಸಾಂಗ ಮಾಡುತ್ತಿದ್ದ. ಯಲ್ಲಾಪುರ ಕಡೆಯಿಂದ ಶಿರಸಿಗೆ ಬರುತ್ತಿದ್ದಾಗ ಕಾರೊಂದಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗ್ರಾಮೀಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.