ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಪ್ರಸ್ತಾಪಿಸುವುದು ಬೇಡ ಕೇಂದ್ರ ಸಚಿವ ಅನಂತಕುಮಾರ್

ಕಾರವಾರ: ನ.10ರಂದು ನಡೆಯಲಿರುವ ಟಿಪ್ಪು ಜಯಂತಿ ಆಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಪ್ರಸ್ತಾಪಿಸುವುದು ಬೇಡ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ, ಬೆಳಗಾವಿ ಮತ್ತು ಉತ್ತರಕನ್ನಡ ಜಿಲ್ಲಾಧಿಕಾರಿಗಳಿಗೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ವಿಜಯಕುಮಾರ್ ತೋರಗಲ್ ಮೂಲಕ ಪತ್ರ ರವಾನಿಸಿರುವ ಸಚಿವರು, ರಾಜ್ಯದ ಸಮ್ಮಿಶ್ರ ಸರ್ಕಾರ ಜನತೆಯ ತೀವ್ರ ವಿರೋಧದ ನಡುವೆಯೂ ನ. 10 ರಂದು ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆಗೆ ನಿರ್ಧರಿಸಿದ್ದಾರೆ. ಇದು ಅತ್ಯಂತ ಖಂಡನೀಯವಾದಂತ ವಿಚಾರವಾಗಿದೆ. ಪ್ರಾರಂಭದಿಂದಲೂ ಸಾರ್ವಜನಿಕರು ಹಾಗೂ ನಾಡಿನ ವಿಚಾರವಾದಿಗಳು ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಟಿಪ್ಪು ಒಬ್ಬ ಹಿಂದು ವಿರೋಧಿ ಹಾಗೂ ಕನ್ನಡ ವಿರೋಧಿಯಾಗಿದ್ದ ಎಂಬುದು ಇತಿಹಾಸದಿಂದ ತಿಳಿಯುತ್ತದೆ. ಈ ಜಯಂತಿಯ ಬಗ್ಗೆ ರಾಜ್ಯ ಎಲ್ಲಾ ಜಿಲ್ಲೆಗಳ ಜನ ಸ್ಪಷ್ಟವಾಗಿ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಇಂಥ ಸಮಾಜಘಾತುಕ ಟಿಪ್ಪುವನ್ನು ವೈಭವಿಕರೀಸಿ ಜಯಂತಿ ಆಚರಿಸಲು ಹೊರಟಿರುವುದು ನಿಜಕ್ಕೂ ಖಂಡನೀಯ. ಆದ್ದರಿಂದ ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಿಸದಂತೆ ಸಚಿವ ಹೆಗಡೆ ಪತ್ರದ ಮೂಲಕ ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.