ನ.5 ಕ್ಕೆ ಟಿಎಸ್‍ಎಸ್‍ನಿಂದ ವಿದ್ಯಾರ್ಥಿ ವೇತನ ವಿತರಣೆ


ಶಿರಸಿ: ದಿ ತೋಟಗರ್ಸ್ ಕೋ- ಆಪರೇಟಿವ್ ಸೇಲ್ ಸೊಸೈಟಿ (ಟಿ.ಎಸ್.ಎಸ್)  ಆಶ್ರಯದಲ್ಲಿ 2018-19 ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ  ಟಿ.ಎಸ್.ಎಸ್ ವ್ಯಾಪಾರಿ ಅಂಗಳದಲ್ಲಿ ನ.5 ರ ಮಧ್ಯಾಹ್ನ 3.30 ಘಂಟೆಗೆ ನಡೆಯಲಿದೆ. ಟಿಎಸ್‍ಎಸ್ ಅಧ್ಯಕ್ಷ ಶಾಂತಾರಾಮ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ, ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನರೇಂದ್ರ ಬಿ.ಆರ್ ಉಪಸ್ಥಿತರಿರುವರು.

 

Categories: ಜಿಲ್ಲಾ ಸುದ್ದಿ

Leave A Reply

Your email address will not be published.