ಈ ಬಾರಿಯ ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಅನಂತಕುಮಾರ ಹೆಸರಿಲ್ಲ; ಕಾರಣ ಗೊತ್ತೇ ?

ಕಾರವಾರ: ನ. 10ರಂದು ನಡೆಯಲಿರುವ ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸುವುದು ಬೇಡ ಎಂದು ಜಿಲ್ಲಾಡಳಿತಕ್ಕೆ ಪತ್ರ ಕಳೆದ ನಾಲ್ಕು ದಿನಗಳ ಹಿಂದೆ ಪತ್ರ ಬರೆದಿದ್ದರಿಂದ ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆಯವರ ಹೆಸರನ್ನು ಕೈಬಿಡಲಾಗಿದೆ.
ಕಳೆದ ವರ್ಷವೂ ಪತ್ರ ಬರೆದಿದ್ದ ಸಚಿವರು:
ಕಳೆದ ವರ್ಷವೂ ಅನಂತಕುಮಾರ ಹೆಗಡೆ, ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸುವುದು ಬೇಡ ಎಂದು ಸರಕಾರಕ್ಕೆ ಜಿಲ್ಲಾಡಳಿತಕ್ಕೆ ಪತ್ರ ಸೂಚನೆ ನೀಡಿದ್ದರು. ಶಿಷ್ಟಾಚಾರಕ್ಕಾಗಿ ಅವರ ಹೆಸರನ್ನು ಹಾಕುವುದು ನಮ್ಮ ಕರ್ತವ್ಯ. ಕಾರ್ಯಕ್ರಮಕ್ಕೆ ಬರುವುದು, ಬಿಡುವುದು ಅವರ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದು ವಿರೋಧದ ನಡುವೆಯೂ ಹೆಸರನ್ನು ಆಮಂತ್ರಣಪತ್ರಿಕೆಯಲ್ಲಿ ಪ್ರಸ್ತಾಪಿಸಲಾಗಿತ್ತು.
ಈ ಬಾರಿ ಹೆಸರು ಕೈಬಿಟ್ಟ ಜಿಲ್ಲಾಡಳಿತ:
ಈ ಸಲ ಟಿಪ್ಪು ಜಯಂತಿಯ ಒಂದು ವಾರದ ಮೊದಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ, ಬೆಳಗಾವಿ ಮತ್ತು ಉತ್ತರಕನ್ನಡ ಜಿಲ್ಲಾಧಿಕಾರಿಗೆ ಸಚಿವರ ವಿಶೇಷ ಕರ್ತವ್ಯಾಧಿಕಾರಿವಿಜಯಕುಮಾರ್ ತೋರಗಲ್ ಮೂಲಕ ಪತ್ರ ಬರೆದು ತಮ್ಮ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಪ್ರಸ್ತಾಪಿಸುವುದು ಬೇಡ ಎಂದು ಸೂಚನೆ ನೀಡಿದ್ದರು.10ರಂದು ನಡೆಯಲಿರುವ ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸುವುದು ಬೇಡ ಎಂದು ಜಿಲ್ಲಾಡಳಿತಕ್ಕೆ ಪತ್ರ ಕಳೆದ ನಾಲ್ಕು ದಿನಗಳ ಹಿಂದೆ ಪತ್ರಬರೆದಿದ್ದರಿಂದ ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆಯವರ ಹೆಸರನ್ನು ಕೈಬಿಡಲಾಗಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.