ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ದೀಪ್ತಿ ಭಟ್ಟ ರಾಜ್ಯ ಮಟ್ಟಕ್ಕೆ


ಶಿರಸಿ: ಇತ್ತೀಚೆಗೆ ಬೆಳಗಾವಿಯಲ್ಲಿ ಶಿಕ್ಷಣ ಇಲಾಖೆ ನಡೆಸಿದ ವಿಭಾಗ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತೋಟಿಮನೆಯ ದೀಪ್ತಿ ಪದ್ಮನಾಭ ಭಟ್ಟ ಕನ್ನಡ ಚರ್ಚಾಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

‘ಮನೋಜ್ಞಾನವಾಗಿ ಭಗವದ್ಗೀತೆ’ ಎಂಬ ವಿಷಯದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಪ್ರಸ್ತುತ ಇವಳು ನಗರದ ಎಮ್.ಇ.ಎಸ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿಯವರು, ಕಾಲೇಜು ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು, ಪಾಲಕರು ಹರ್ಷ ವ್ಯಕ್ತ ಪಡಿಸಿದ್ದಾರೆ.

Categories: ಚಿತ್ರ ಸುದ್ದಿ

Leave A Reply

Your email address will not be published.