ಆರತಿಬೈಲ್ ಘಟ್ಟದಲ್ಲಿ ಲಾರಿ ಪಲ್ಟಿ

ಯಲ್ಲಾಪುರ: ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಶನಿವಾರ ನಡೆದಿದೆ.
ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಸರಕು ತುಂಬಿಕೊಂಡು ಬರುತ್ತಿರುವ ಸಂದರ್ಭದಲ್ಲಿ ಆರತಿಬೈಲ್ ಘಟ್ಟದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಲಾರಿ ಜಖಂಗೊಂಡಿದೆ. ಚಾಲಕ-ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಾರಿ ರಸ್ತೆಯ ಮಧ್ಯದಲ್ಲಿಯೇ ಪಲ್ಟಿಯಾಗಿರುವುದರಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಮುಖ ಸಂಚಾರ ನಡೆಸುವಂತಾಯಿತು. ನಂತರ ಕ್ರೇನ್ ಬಳಸಿ ಲಾರಿ ತೆರವುಗೊಳಿಸಿದ ನಂತರ ಸಂಚಾರ ಸುಗಮಗೊಂಡಿತು.

Categories: ಚಿತ್ರ ಸುದ್ದಿ

Leave A Reply

Your email address will not be published.