ವಿಶ್ವದರ್ಶನ ಪ್ರೌಢಶಾಲಾ ಮುಖ್ಯಾಧ್ಯಾಪಕಿ ಮುಕ್ತಾಶಂಕರಗೆ ಜ್ಞಾನ ಸಿಂಧು ಪ್ರಶಸ್ತಿ


ಯಲ್ಲಾಪುರ: ಹುಬ್ಬಳ್ಳಿಯಿಂದ ಪ್ರಸಾರಗೊಳ್ಳುವ ಶಿಕ್ಷಣ ಜ್ಞಾನ ಮಾಸಪತ್ರಿಕೆಯಿಂದ ನೀಡುವ “ಜ್ಞಾನ ಸಿಂಧು” ಪ್ರಶಸ್ತಿಗೆ ಯಲ್ಲಾಪುರದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಮುಕ್ತಾಶಂಕರ ಆಯ್ಕೆಯಾಗಿದ್ದಾರೆ.

ಹುಬ್ಬಳ್ಳಿಯ ಗೋಕುಲ ರಸ್ತೆಯ ಡಾ.ಕೆ.ಎಸ್.ಶರ್ಮಾ ಶೈಕ್ಷಣಿಕ ಸಂಕಿರಣದ ವಿಶ್ವ ಶ್ರಮ ಚೇತನದಲ್ಲಿ ಡಿ.8 ರಂದು ಬೆಳಿಗ್ಗೆ 10.30 ಕ್ಕೆ ನಡೆಯಲಿರುವ ಪತ್ರಿಕೆಯ 16 ನೇ ವಾರ್ಷಿಕೋತ್ಸವ ಮತ್ತು ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕಿಯಾಗಿರುವ ಮುಕ್ತಾ ಶಂಕರ ಅವರ ಶೈಕ್ಷಣಿಕ ಸಾಧನೆಗಾಗಿ ಪ್ರಶಸ್ತಿ ಲಭಿಸಿದೆ. ಅವರು ಸಾಹಿತ್ಯ, ಸಾಂಸ್ಕøತಿಕ ಕ್ಷೇತ್ರಗಳಲ್ಲಿ ಹಾಗೂ ವಿವಿಧ ಸಂಘಟನೆಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.