ಅಕ್ರಮ ಗೋವಾ ಮದ್ಯ ವಶಕ್ಕೆ: ಆಟೋ ಜಪ್ತಿ

ಕಾರವಾರ: ಆಟೋದಲ್ಲಿ ಸಾಗಿಸುತ್ತಿದ್ದ ಅಕ್ರಮ ಗೋವಾ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು‌ ಆಟೋ ಸಹಿತ 87 ಸಾವಿರ ಮೌಲ್ಯದ ಮದ್ಯ ವಶಪಡಿಸಿಕೊಂಡಿರುವ ಘಟನೆ ಕಾರವಾರದಲ್ಲಿ ನಡೆದಿದೆ.
ಕಾರವಾರ ತಾಲೂಕಿನ ಮಾಜಾಳಿ ಮೀನು ಮಾರುಕಟ್ಟೆ ಕಡೆಯಿಂದ ರಿಕ್ಷಾದಿಂದ ಅಕ್ರಮ ಗೋವಾ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಈ ಸಂದರ್ಭದಲ್ಲಿ 112 ಲೀಟರ್ ಗೋವಾ ಮದ್ಯ, 12 ಲೀಟರ್ ಬಿಯರ್ ಹಾಗೂ ಆಟೋವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಪರಾರಿಯಾಗಿದ್ದು, ಈ ಬಗ್ಗೆ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.