ಈಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಯಲ್ಲಾಪುರ: ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೀಪೋತ್ಸವ ನಡೆಯಿತು. ಶತರುದ್ರಾಭಿಷೇಕ,ರುದ್ರಹೋಮ, ಪೂರ್ಣಾಹುತಿ ಮುಂತಾದ ಧಾರ್ಮಿಕ ಕಾರ್ಯಕ್ರಮ ನಡೆಯಿತು. ದೇವರಿಗೆ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.
ರಾತ್ರಿ ನಡೆದ ದೀಪೋತ್ಸವದಲ್ಲಿ ದೇವಸ್ಥಾನದ ತುಂಬ ಸಾವಿರಾರು ದೀಪಗಳನ್ನು ಬೆಳಗಿಸಲಾಯಿತು. ಸುತ್ತಮುತ್ತಲಿನ ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Categories: ಚಿತ್ರ ಸುದ್ದಿ

Leave A Reply

Your email address will not be published.