ಅಸಾಧಾರಣ ಸಾಧನೆ ಮಕ್ಕಳ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಕಲೆ, ಯಾವುದೇ ಕ್ಷೆತ್ರದಲ್ಲಿ ನಾವಿನ್ಯತೆ, ರಾಷ್ಟ್ರೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಸಮಾಜ ಸೇವೆ, ಸಂಗೀತ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಪ್ರಶಸ್ತಿಯು ತಲಾ 10,000 ರೂ. ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರಬೇಕು. ಅಸಾಧಾರಣವೆಂದು ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸುವುದು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.

2018 ನೇ ಸಾಲಿನ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು, ಕಾರವಾರದ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪಡೆಯಬಹುದಾಗಿದೆ. ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಜ. 31ರೊಳಗೆ ತಲುಪುವಂತೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಇವರಿಗೆ ಕಳುಹಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.