ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಐದು ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಮಹಿಳೆಯರಿಗೆ ಮತ್ತು ಸಂಸ್ಥೆಗಳಿಗೆ ಹಾಗೂ ಕ್ರೀಡಾ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಸಾಹಸ ಪ್ರದರ್ಶಿಸಿ ಹೋರಾಡಿದ 18ರಿಂದ 45 ವಯೋಮಿತಿಯೊಳಗಿನ ಮಹಿಳೆಯರಿಗೆ ವೀರ ಮಹಿಳಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಗಾಗಿ ಆಯ್ಕೆ ಮಾಡಲು ರಾಜ್ಯ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಉತ್ತರ ಕನ್ನಡ ಜಿಲ್ಲೆಯ ಅರ್ಹ ಮಹಿಳೆಯರು ಮತ್ತು ಸಂಸ್ಥೆಗಳು ನಿಗದಿತ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಜ.25 ರೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಇವರಿಗೆ ದ್ವಿಪ್ರತಿಯಲ್ಲಿ ಸಲ್ಲಿಸುವಂತೆ ತಿಳಿಸಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.