ನೀರಿನ ಅಭಾವದ ಸೂಕ್ತ ಕ್ರಮಕ್ಕೆ ಕುಮಟಾ ತಾ.ಪಂ ದಲ್ಲಿ ಸಮಾಲೋಚನಾ ಸಭೆ

ಕುಮಟಾ: ಬರಗಾಲ ಹಾಗೂ ಮುಂದಿನ ದಿನಗಳಲ್ಲಿ ಉದ್ಭವವಾಗುವ ನೀರಿನ ಅಭಾವದ ಕುರಿತಾಗಿ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸಭೆಯಲ್ಲಿ ನೀಡಿರುವ ಆದೇಶದ ಮೇರೆಗೆ ಕುಮಟಾ ತಾಲೂಕಾ ಪಂಚಾಯತ ಸಭಾಭವನದಲ್ಲಿ ಶುಕ್ರವಾರ ಸಮಾಲೋಚನಾ ಸಭೆ ನಡೆಸಲಾಯಿತು.

ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಸಿ.ಟಿ ನಾಯ್ಕ ಮಾತನಾಡಿ, ತಹಸೀಲ್ದಾರರು, ಪಿಆರ್‍ಇಡಿ ಇಂಜಿನಿಯರ್, ಕುಡಿಯುವ ನೀರು ಯೋಜನೆಯ ಅಭಿಯಂತರರು ಹಾಗೂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ ಪಿಡಿಒಗಳು ಸೇರಿದಂತೆ ಇನ್ನಿತರ ಅಧಿಕಾರಿಗಳನ್ನೊಳಗೊಂಡು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಭೆ ನಡೆಸಲಾಗಿದೆ. ಬರಗಾಲ ಹಾಗೂ ಮುಂದಿನ ದಿನಗಳಲ್ಲಿ ಉದ್ಭವವಾಗುವ ಕುಡಿಯುವ ನೀರಿನ ಸಮಸ್ಯೆಯ ಕುರಿತು ನಾವು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿ, ಸೂಕ್ತ ಕ್ರಮತೆಗೆದುಕೊಳ್ಳುವ ಬಗೆಗೆ ಚಿಂತಿಸಲಾಗಿದೆ. ಮೇಲಧಿಕಾರಿಗಳು ಸೂಚಿಸಿದ ನಿಯಮಾವಳಿಗಳನ್ನು ಪಾಲಿಸಲು ತಾಲೂಕಾ ಮಟ್ಟದಲ್ಲಿ ನಾವೆಲ್ಲರು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಿಆರ್‍ಇಡಿ ಇಂಜಿನಿಯರ್ ರಾಮದಾಸ ಗುನಗಿ, ಜಿ.ಪಂ. ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಂಜಿನಿಯರ್ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾ.ಪಂ. ಪಿಡಿಒಗಳು ಉಪಸ್ಥಿತರಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.