ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ತಂಡಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ

ಕಾರವಾರ: ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ ಜಿಲ್ಲಾ ಪೊಲೀಸ್ ಪಡೆ ಮೈದಾನದಲ್ಲಿ ಮುಕ್ತಯ ಸಮಾರಂಭಗೊಂಡಿದ್ದು, ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ತಂಡಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ ಕ್ರೀಡಾಕೂಟ ಕಾರಣಾಂತರದಿಂದ ಮೂಂದೂಡಲ್ಪಟ್ಟಿತ್ತು. ನಡೆದ ಕ್ರೀಡಾಕೂಟದಲ್ಲಿ ಹಗ್ಗ ಜಗ್ಗಾಟ, ರಿಲೇ, 100 ಮೀ.ಓಟದ ಸ್ಪರ್ಧೆಗಳು ಆಯೋಜಿಸಿದರು. ಜಿಲ್ಲಾ ಸತ್ರ ಮತ್ತು ನ್ಯಾಯಾಧೀಶ ಟಿ.ಜಿ.ಶಿವಶಂಕರ ಗೌಡ ಮುಖ್ಯ ಅತಿಥಿಯಾಗಿ ಆಗಮಿಸಿ ಹಗ್ಗ ಜಗ್ಗಾಟ ಸ್ಪರ್ಧೆಯ ಫೈನಲ್ ಪಂದ್ಯಕ್ಕೆ ಚಾಲನೆ ನೀಡಿದರು.

ಡಿಎಆರ್ ಮತ್ತು ಕಾರವಾರ ವಿಭಾಗದ ತಂಡಗಳ ನಡುವೆ ನಡೆದ ಸ್ಪರ್ಧೆಯಲ್ಲಿ ಡಿಎಆರ್ ತಂಡ ವಿಜೇತರಾಗಿದರು ಹೆಚ್ಚು ಸ್ಪರ್ಧೆಗಳಲ್ಲಿ ವಿಜೇತರಾದ ಡಿಎಆರ್ ತಂಡ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ವೈಯಕ್ತಿಕ ಸ್ಪರ್ಧೆಗಳಲ್ಲಿ ಡಿಎಆರ್‍ನ ಮೌಲಾಲಿ ಮರಗಡಿ ಪುರುಷ ವಿಭಾಗದಲ್ಲಿ, ದಾಂಡೇಲಿ ಠಾಣೆಯ ಚಂದ್ರಿಕಾ ನಾಯ್ಕ ಮಹಿಳಾ ವಿಭಾಗದಲ್ಲಿ ಚಾಂಪಿಯನನಾಗಿ ಪ್ರಶಸ್ತಿ ಪಡೆದಿದರು.

ಬಹುಮಾನ ವಿಜೇತರರಿಗೆ ಜಿಲ್ಲಾ ನ್ಯಾಯಾಧೀಶರು ಬಹುಮಾನ ವಿತರಣೆ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ವಿ.ಪಾಟೀಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲಕೃಷ್ಣ ಬ್ಯಾಕೋಡ್ ಕಾರ್ಯಕ್ರಮದಲ್ಲಿ ಇದ್ದರು. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಅನೇಕರಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.