ಶಿರಸಿಯಲ್ಲಿ ಜ.17ಕ್ಕೆ ‘ಆಳ್ವಾಸ್ ಸಾಂಸ್ಕೃತಿಕ ವೈಭವ’

ಶಿರಸಿ: ಜಿಲ್ಲಾಡಳಿತ ಉ.ಕ, ಪ್ರವಾಸೋದ್ಯಮ ಇಲಾಖೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡುಬಿದಿರೆ, ಆಳ್ವಾಸ್ ನುಡಿಸಿರಿ ಘಟಕ, ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಜ.17 ಗುರುವಾರ ಸಂಜೆ 5.30ರಿಂದ ನಗರದ ವಿಕಾಸಾಶ್ರಮ ಮೈದಾನದಲ್ಲಿ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮ ಏರ್ಪಡಿಸಿದೆ.

ಸಾಂಸ್ಕೃತಿಕ ವೈಭವದಲ್ಲಿ: ಕೇರಳದ ಮೋಹಿನಿ ಅಟ್ಟಂ-ಅಷ್ಟಲಕ್ಷ್ಮೀ, ಬಡಗುತಿಟ್ಟು ಯಕ್ಷಗಾನ-ದಾಸ ದೀಪಾಂಜಲಿ, ಆಂದ್ರದ ಜನಪದ ಬಂಜಾರ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಶಾಸ್ತ್ರೀಯ ನೃತ್ಯ ನವದುರ್ಗೆ, ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ಮಲ್ಲಕಂಬ ಮತ್ತು ರೋಷ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ದೋಲ್ ಚಲಮ್, ಕಥಕ್ ನೃತ್ಯ-ನವರಂಗ್, ಪಶ್ಚಿಮ ಬಂಗಾಳದ ಪುರುಲಿಯ ಸಿಂಹ ನೃತ್ಯ, ತೆಂಕುಯಕ್ಷ ಪ್ರಯೋಗ- ಅಗ್ರಪೂಜೆ ಮುಂತಾದ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.