ಸ್ವಾಮಿ ವಿವೇಕಾನಂದರು ಯುವ ಶಕ್ತಿಯ ಪ್ರತೀಕ; ನ್ಯಾ.ಟಿ.ಗೋವಿಂದಯ್ಯ


ಕಾರವಾರ: ಸ್ವಾಮಿ ವಿವೇಕಾನಂದರು ಭಾರತದ ಯುವಶಕ್ತಿಯ ಪ್ರತೀಕ ಎಂದು ಜಿಲ್ಲಾ ಕಾನೂ ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ ಬಣ್ಣಿಸಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಅವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಾಮಿ ವಿವೇಕಾನಂದರ 156ನೇ ಜಯಂತಿ ಅಂಗವಾಗಿ ಯುವ ಸಪ್ತಾಹ ಕಾರ್ಯಕ್ರಮ ಹಾಗೂ ಚಿಕಾಗೋ ಸಮ್ಮೇಳನ 125ನೇ ವರ್ಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ಭಾರತದ ಯುವ ಶಕ್ತಿಗೆ ಪ್ರೇರಣೆ ಮತ್ತು ಪ್ರತೀಕ. ಈ ಮೂಲಕ ಯುವ ಭಾರತವನ್ನು ಜಗತ್ತಿಗೆ ಪರಿಚಯಿಸಿದರು ಎಂದು ಹೇಳಿದರು. ಇಂದಿನ ಯುವ ಸಮುದಾಯ ವಿವೇಕಾನಂದರ ವಾಣಿಯನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು. ಉನ್ನತ ವಿದ್ಯಾಭ್ಯಾಸದ ಗುರಿ ಹೊಂದುವ ಮೂಲಕ ದೇಶದ ಕೀರ್ತಿಯನ್ನು ಜಗತ್ತಿನ ಉದ್ದಗಲಕ್ಕೂ ಪಸರಿಸಬೇಕು. ಆಗಮಾತ್ರ ಸ್ವಾಮಿ ವಿವೇಕಾನಂದರ ಆದರ್ಶಕ್ಕೆ ಅರ್ಥ ಬರುತ್ತದೆ ಎಂದರು.ಸ್ವಾಮಿ ವಿವೇಕಾನಂದರನ್ನು ಕೇವಲ ವರ್ಗಕ್ಕೆ ಸೀಮಿತಗೊಳಿಸುವ ಮೂಲಕ ಅವರನ್ನು ಸಂಕುಚಿತಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇದು ಸಲ್ಲದು. ಸ್ವಾಮಿ ವಿವೇಕಾನಂದರು ಎಲ್ಲ ವರ್ಗ ಮತ್ತು ಎಲ್ಲ ಧರ್ಮಕ್ಕೂ ಸೇರದರವರು ಎಂದರು.

ಸಾನಿಧ್ಯ ವಹಿಸಿದ್ದ ರಾಮಕೃಷ್ಣ ಆಶ್ರಮದ ಭಾವೇಶಾನಂದ ಸ್ವಾಮೀಜಿಯವರು, ಸ್ವಾಮಿ ವಿವೇಕಾನಂದರು ಜಗತ್ತಿನ ಎಲ್ಲ ಯುವ ಸಮುದಾಯದ ಪ್ರೇರಕ ಶಕ್ತಿ ಎಂದರು. ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಅವರ ಜಯಂತಿಗೆ ಸಾರ್ಥಕತೆ ತರಬೇಕು ಎಂದು ಆಶೀರ್ವಚನ ನೀಡಿದರು.

ಸರ್ಕಾರಿ ಕಲಾ ಮತ್ತು ವಿಜ್ಣಾನ ಕಾಲೇಜಿನ ಪ್ರಾಧ್ಯಾಪಕ ವಿ.ಎಲ್.ಗಿರಿ ವಿಶೇಷ ಉಪನ್ಯಾಸ ನೀಡಿ, ವಿಶ್ವಕ್ಕೆ ಬ್ರಾತೃತ್ವ ಸಾರಿದ ಮಹಾನ್ ಸನ್ಯಾಸಿ ಸ್ವಾಮಿ ವಿವೇಕಾನಂದರು. ಸರ್ವಧರ್ಮ ಸಹಿಷ್ಣುತೆಯ ಧರ್ಮ ಎಂದು ಭಾರತ ಧರ್ಮವನ್ನು ಚಿಕಾಗೋ ಸಮ್ಮೇಳನದ ಮೂಲಕ ಜಗತ್ತಿಗೆ ಸಾರಿದರು ಎಂದು ಹೇಳಿದರು. ತಾಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಕಲ್ಪನಾ ಕೆರವಡಿಕರ್, ಸರ್ಕಾರಿ ಮಹಿಳಾ ಕಾಲೇಜಿನ ಅಧ್ಯಾಪಕ ಪ್ರೊ.ಗಂಗೊಳ್ಳಿ, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕಿ ಜಿ.ಗಾಯತ್ರಿ, ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಜಿ., ಗಾಯಕ ದತ್ತ ಶಾನುಭೋಗ್ ಇದ್ದರು

Categories: ಜಿಲ್ಲಾ ಸುದ್ದಿ

Leave A Reply

Your email address will not be published.