ನಗರ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ

ಕಾರವಾರ: ನಗರ ಪುನರ್ವಸತಿ ಕಾರ್ಯಕರ್ತರನ್ನು ಗೌರವಧನ ಆಧಾರದ ಮೇಲೆ ನೇಮಿಸಿಕೋಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರಣ ಸಬಲೀಕರಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಕನಿಷ್ಟ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರುವ 18 ರಿಂದ 45 ವಯೋಮಿತಿಯೊಳಗಿನ ಆಸಕ್ತ ವಿಕಲಚೇತನ ಅಭ್ಯರ್ಥಿಗಳು ಫೆ. 28 ರ ಒಳಗೆ ನಿಗದಿ ಅರ್ಜಿ ನಮೂನೆಯನ್ನು ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಪಡೆಯಬಹುದಾಗಿದೆ.

ಕಾರವಾರ, ಶಿರಶಿ, ದಾಂಡೇಲಿ ನಗರಸಭೆಗಳಿಗೆ ತಲಾ 3 ಹಾಗೂ ಅಂಕೋಲಾ, ಕುಮಟಾ, ಹಳಿಯಾಳ, ಪುರಸಭೆಗಳಿಗೆ ತಲಾಒಬ್ಬರು ಮತ್ತು ಹೊನ್ನಾವರ, ಭಟ್ಕಳ, ಸಿದ್ಧಾಪುರ, ಯಲ್ಲಾಪುರ, ಮುಂಡಗೋಡ ತಲಾ ಒಬ್ಬರು ನಗರ ಪುನರ್ವಸತಿ ಕಾರ್ಯಕರ್ತರು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಅರ್ಜಿಯನ್ನುಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳು. ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಸಬಹುದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-221914 ಸಂಪರ್ಕಿಸಲು ತಿಳಿಸಲಾಗಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.