ಜನತೆಗಾಗಿ ವಿಜ್ಞಾನ- ವಿಜ್ಞಾನಕ್ಕಾಗಿ ಜನತೆ ಲೇಖನ ಆಹ್ವಾನ

ಕಾರವಾರ: ಜನತೆಗಾಗಿ ವಿಜ್ಞಾನ, ವಿಜ್ಞಾನಕ್ಕಾಗಿ ಜನತೆ ಎಂಬ ಲೇಖನ ಸ್ಪರ್ಧೆಯನ್ನ ರಾಜ್ಯ ವಿಜ್ಞಾನ ಪರಿಷತ್ತು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದೆ.

ನೋಬೆಲ್ ಪ್ರಶಸ್ತಿ ವಿಜೇತ ಭಾರತದ ಹೆಮ್ಮೆಯ ವಿಜ್ಞಾನಿ ಸರ್.ಸಿ.ವಿ.ರಾಮನ್ ರವರ ಪ್ರತಿಷ್ಠಿತ ಅನ್ವೇಷಣೆ ರಾಮನ್ ಪರಿಣಾಮವನ್ನು ಜಗತ್ತಿಗೆ ಘೋಷಿಸಿದ ದಿನವಾದ ಫೆ.28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಇದರ ಅಂಗವಾಗಿ ರಾಜ್ಯ ವಿಜ್ಞಾನ ಪರಿಷತ್ ವಿಜ್ಞಾನಾಸಕ್ತರಿಗೆ ಜನತೆಗಾಗಿ ವಿಜ್ಞಾನ, ವಿಜ್ಞಾನಕ್ಕಾಗಿ ಜನತೆ ಎಂಬ ವಿಷಯದ ಮೇಲೆ ಲೇಖನ ಸ್ಪರ್ಧೆ ಆಯೋಜಿಸಿದೆ.

ಸ್ಪರ್ಧೆಯಲ್ಲಿ ಭಾಗವಹಿಸುವವರು ಸಾವಿರ ಪದಗಳು ಮೀರದಂತೆ ಕನ್ನಡದಲ್ಲಿ ಲೇಖನ ಬರೆದು, ಲೇಖನದೊಂದಿಗೆ ತಮ್ಮ ಹೆಸರು, ಪೂರ್ಣ ವಿಳಾಸ ದೂರವಾಣಿ ಸಂಖ್ಯೆ ಹಾಗೂ ಇ-ಮೇಲ್ ವಿವರಗಳನ್ನು ನಮೂದಿಸಿ, ಫೆ.23ರ ಒಳಗಾಗಿ ಗೌರವ ಕಾರ್ಯದರ್ಶಿ, ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಭವನ, ನಂ24/2, 21ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು 560070 ಪೋಸ್ಟ್ ಮೂಲಕ ಅಥವಾ ಇ-ಮೇಲ್ ಗೆ ಕಳುಹಿಸಬಹುದು. ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದೆಂದು ಕರಾವಿಪ ಗೌರವ ಕಾರ್ಯದರ್ಶಿ ಗಿರೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.