ನಟ ರಾಜೇಶ್ ಧ್ರುವ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ: ಪ್ರಕರಣ ದಾಖಲು

ಶಿರಸಿ: ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಅಖಿಲ್ ಪಾತ್ರ ನಿರ್ವಹಿಸುತ್ತಿರುವ ಶಿರಸಿಯ ರಾಜೇಶ್ ಧ್ರುವ 2017ರಲ್ಲಿ ಶ್ರುತಿ ಎಂಬ ಯುವತಿಯನ್ನು ವಿವಾಹವಾಗಿದ್ದರು. ಇವರು ನಟ ಮುಖ್ಯಮಂತ್ರಿ ಚಂದ್ರು ಅವರ ಮನೆಯಲ್ಲಿ ಬಾಡಿಗೆಗೆ ಇದ್ದರು. ಆದರೆ ರಾಜೇಶ್ ತನಗೆ ಮದುವೆಯಾಗಿಲ್ಲ ಎಂದು ಹೇಳಿಕೊಂಡು ಓಡಾಡುತ್ತಿದ್ದರು. ಜತೆಗೆ ಪತ್ನಿ ಶ್ರುತಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಮತ್ತು ಆಕೆಯನ್ನು ಮನೆಯಿಂದ ಹೊರಹಾಕಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ರಾಜೇಶ್ ಧ್ರುವ ವಿರುದ್ಧ ಬಸವನಗುಡಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.