ಸಚಿವ ದೇಶಪಾಂಡೆ ಉಸ್ತುವಾರಿ ಸಚಿವರಲ್ಲ, ಕಮೀಷನ್ ಪಾಂಡೆ: ಮಾಜಿ ಶಾಸಕ ಸುನೀಲ್ ಹೆಗಡೆ

ಕಾರವಾರ: ರಾಜ್ಯ ಕಂದಾಯ ಸಚಿವ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ಅಲ್ಲ. ಅವರು ಕಮಿಷನ್ ಪಾಂಡೆ. ಫಟಿಂಗ್ ಪಾಂಡೆ ಎಂದು ಹಳಿಯಾಳ ಕ್ಷೇತ್ರದ ಮಾಜಿ ಶಾಸಕ ಸುನೀಲ್ ಹೆಗಡೆ ಟೀಕಿಸಿದ್ದಾರೆ.

ಕಾರವಾರದ ಪತ್ರಿಕಾ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಪಾಂಡೆ ಅವರು ತಾವು ನಡೆದಿದ್ದೇ ದಾರಿ. ತಾವು ಮಾಡಿದ್ದೇ ಕಾಯ್ದೆಎನ್ನುತ್ತಿದ್ದಾರೆ. ಇವರ ಜಿಲ್ಲಾ ಉಸ್ತುವಾರಿಕೆಯಲ್ಲಿ ಉತ್ತರ ಕನ್ನಡ ಎಲ್ಲೂ ಅಭಿವೃದ್ಧಿ ಕಂಡಿಲ್ಲ. ಕೇವಲ ಭ್ರಷ್ಟಾಚಾರ ಮಾತ್ರ ಇಲ್ಲಿ ತಾಂಡವ ಆಡುತ್ತಿದೆ ಎಂದು ದೂರಿದರು.

ಜನರಿಗೆ ಇ- ಸ್ವತ್ತಿನಿಂದ ಸಮಸ್ಯೆ ಆಗುತ್ತಿದೆ. ಇದನ್ನು ರದ್ದುಪಡಿಸುವುದು ಕಂದಾಯ ಸಚಿವರಾಗಿರುವ ದೇಶಪಾಂಡೆ ಅವರಿಗೆ ದೊಡ್ಡ ಕೆಲಸವೇನು ಅಲ್ಲ. ಆದರೆ, ಅವರು ಅದನ್ನುತೆಗೆಯಲು ಹೋಗುವುದಿಲ್ಲ. ಕಾರಣ, ಅದರಿಂದ ಅವರಿಗೆ ಕಮಿಷನ್ ಸರಿಯಾಗಿ ಬರುತ್ತಿದೆ. ಇ- ಸ್ವತ್ತು ಹೋದರೆ ತಮ್ಮ ಆದಾಯಕ್ಕೆ ಹೊಡೆತ ಬೀಳುತ್ತದೆ ಎಂದು ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಸುನೀಲ್ ಹೆಗ್ಡೆ ಕಿಡಿಕಾರಿದರು.

ನರೇಗಾ ಯೋಜನೆಯ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸುವ ಮೂರ್ಖ ಪಾಂಡೆಯವರೇ, ಈ ಹಿಂದೆ ಹತ್ತು ವರ್ಷ ಮನಮೋಹನ್ ಸಿಂಗ್ಪ್ರಧಾನಿಯಾಗಿದ್ದಾಗ ಎಷ್ಟು ಹಣ ರಾಜ್ಯಕ್ಕೆ ಬಿಡುಗಡೆ ಮಾಡಿದ್ದರು. ಅದರ ಲೆಕ್ಕ ಕೊಡಿ ಎಂದು ಸವಾಲು ಹಾಕಿದರು.

ದೇಶಪಾಂಡೆ ಅವರು ಉಸ್ತುವಾರಿ ಮಂತ್ರಿಗಳಿಗೆ ದೇಶದ ಬಗ್ಗೆ ಗೌರವ ಇದೆಯಾ ಎಂದು ಪ್ರಶ್ನಿಸಿದ ಅವರು, ಪುಲ್ವಾಮಾದಲ್ಲಿ ಸೈನಿಕರ ಮೇಲೆ ಉಗ್ರರು ದಾಳಿ ನಡೆಸಿದ ಎರಡೇದಿನಕ್ಕೆ ದಾಂಡೇಲಿ ಉತ್ಸವದಲ್ಲಿ ಸಚಿವರು ಪಾಲ್ಗೊಂಡಿದ್ದಾರೆ. ಅಲ್ಲಿ ಮನೋರಂಜನಾ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಆರೋಪಿಸಿದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.