ಜಿಲ್ಲೆಯಲ್ಲಿ ಒಟ್ಟೂ 1,09,803 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗಿದೆ: ಡಾ.ಜಿ.ಎನ್ ಅಶೋಕ ಕುಮಾರ

ಕಾರವಾರ: ಜಿಲ್ಲೆಯಲ್ಲಿ ಮಾ.10 ರಿಂದ 13 ರವರೆಗೆ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪಲ್ಸ್ಸ್ ಪೊಲಿಯೋ ಲಸಿಕೆ ಹಾಕಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ ನಗರ ಪ್ರದೇಶಗಳಲ್ಲಿ 28484 ಮಕ್ಕಳಿಗೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 81319 ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕಿದ್ದು ಜಿಲ್ಲೆಯಲ್ಲಿ ಒಟ್ಟೂ 109803 ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಹಾಕಲಾಗಿದೆ. ಜಿಲ್ಲೆಯ ಪ್ರಗತಿಯು ಶೇ.104.37 ರಷ್ಟಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಜಿ.ಎನ್ ಅಶೋಕ ಕುಮಾರ ತಿಳಿಸಿದ್ದಾರೆ.

ಜಿಲ್ಲೆಯ ನಗರ ಪ್ರದೇಶಗಳಲ್ಲಿ 25,137 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 80,031 5 ವರ್ಷದೊಳಗಿನ ಮಕ್ಕಳನ್ನು ಗುರುತಿಸಿದ್ದು ಪೂರ್ಣ ಪ್ರಗತಿ ಸಾಧಿಸಲು ಆರೋಗ್ಯ ಮತ್ತು ಕು.ಕ. ಇಲಾಖೆಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಜಿಲ್ಲೆಯ ಎಲ್ಲ ಇಲಾಖೆಗಳು ಈ ಕಾರ್ಯಕ್ಕೆ ಸಹಕಾರ ನೀಡಿದ್ದು ಜಿಲ್ಲೆಯಲ್ಲಿ ಒಟ್ಟು 873 ಪಲ್ಸ್ ಪೊಲಿಯೋ ಬೂತ್‍ಗಳನ್ನು ನಿರ್ಮಿಸಿದ್ದು ಒಟ್ಟು 3607 ಇಲಾಖೆ ಹಾಗೂ ಇಲಾಖೇತರ ಮತ್ತು ಸ್ವಯಂ ಸೇವಾ ಸಂಸ್ಥೆಯ ಸದಸ್ಯರನ್ನು ನಿಯೋಜಿಸಲಾಗಿತ್ತು. ಅಭಿಯಾನದ ಮೇಲ್ವಿಚಾರಣೆಗಾಗಿ ಒಟ್ಟು 190 ಮೇಲ್ವಿಚಾರಕರನ್ನು ಹಾಗೂ ಎಲ್ಲ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು.

ವಿಶೇಷವಾಗಿ ರೋಟರಿ ಕ್ಲಬ್ ಹಾಗೂ ಇತರೇ ಸ್ವಯಂ ಸೇವಾ ಸಂಸ್ಥೆಗಳು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದವು. ಪಲ್ಸ್ ಪೊಲಿಯೋ ಅಭಿಯಾನ ಉದ್ಘಾಟನೆಯನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ನೆರವೇರಿದ ಬಳಿಕ ಮಾ. 11 ಹಾಗೂ 12 ರಂದು ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಮಾ. 11,12,13 ರಂದು ನಗರ ಪ್ರದೇಶಗಳಲ್ಲಿ ತಂಡದ ಸದಸ್ಯರು ಮನೆ ಭೇಟಿ ಮಾಡಿ ಬಿಟ್ಟು ಹೋದ ಮಕ್ಕಳಿಗೆ ಲಸಿಕೆ ಹಾಕಿಸಲಾಯಿತು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.