ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವದಲ್ಲಿ ಬೃಹತ್ ರಕ್ತದಾನ ಶಿಬಿರ

ಯಲ್ಲಾಪುರ: ತಾಲೂಕಿನ ಬಿಸಗೋಡ ವೀರಾಂಜನೇಯ ದೇವಸ್ಥಾನದಲ್ಲಿ 40 ನೇ ವಾರ್ಷಿಕೋತ್ಸವ ಹಾಗೂ ತಾಯಮ್ಮ ದೇವಿ, ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಿತು

ದೇವಸ್ಥಾನ ಸಮಿತಿ, ಟಿಎಸ್‍ಎಸ್ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಜಾತ್ರೆ ಹಾಗೂ ಬಿಸಗೋಡ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ವರ್ಷಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಬೃಹತ್ ರಕ್ತದಾನ ಶಿಬಿರವನ್ನು ರಕ್ತದಾನ ಮಾಡುವ ಮೂಲಕ ಡಾ.ರವಿ ಭಟ್ಟ ಬರಗದ್ದೆ ಉದ್ಘಾಟಿಸಿದರು. ಎಸ್‍ಡಿಎಂಸಿ ಅಧ್ಯಕ್ಷ ಗಣಪತಿ ಕರುಮನೆ, ಮುಖ್ಯಾಧ್ಯಾಪಕ ಸಿ.ಜಿ.ನಾಯ್ಕ, ಶಿಕ್ಷಕ ಶ್ರೀನಿವಾಸ ನಾಯ್ಕ, ದೇವಸ್ಥಾನದ ಆಡಳಿತ ಸಮಿತಿಯ ಕಾರ್ಯದರ್ಶಿ ದತ್ತಾತ್ರೇಯ ಬೋಳಗುಡ್ಡೆ ಇತರರಿದ್ದರು. ಟಿಎಸ್‍ಎಸ್ ರಕ್ತನಿಧಿ ಕೇಂದ್ರದ ಡಾ.ಪಿ.ಎಸ್.ಹೆಗಡೆ ನೇತೃತ್ವದ ತಂಡದವರು ದಾನಿಗಳಿಂದ ರಕ್ತ ಸಂಗ್ರಹಿಸಿದರು. 50 ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.