ಗೋವಾ ಸಿ.ಎಂ ಮನೋಹರ ಪರಿಕ್ಕರ್ ಇನ್ನಿಲ್ಲ


ಪಣಜಿ: ಕಳೆದೊಂದು ವರ್ಷಗಳಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಭಾನುವಾರ ನಿಧನರಾಗಿದ್ದಾರೆ.

63 ವರ್ಷದ ಮನೋಹರ್ ಪರಿಕ್ಕರ್ ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ವರ್ಷ ಅಮೆರಿಕದಲ್ಲಿ 3 ತಿಂಗಳ ಕಾಲ ಚಿಕಿತ್ಸೆ ಪಡೆದಿದ್ದ ಅವರು ಸೆ.6 ರಂದು ಚೇತರಿಸಿಕೊಂಡು ಮತ್ತೆ ತಾಯ್ನಾಡಿಗೆ ಮರಳಿದ್ದರು.

ಪರಿಕ್ಕರ್ ಕುರಿತು: 1955ರಲ್ಲಿ ಗೋವಾದ ಮಾಪುಸದಲ್ಲಿ ಜನಿಸಿದ ಅವರು ಬಹಳ ಚಿಕ್ಕ ವಯಸ್ಸಿನಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಸೇರಿದವರು. 1994ರಲ್ಲಿ ಮೊದಲಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2000 ನೇ ಇಸವಿಯ ಅ.24ರಂದು ಮೊದಲ ಬಾರಿ ಗೋವಾದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 2014ರಲ್ಲಿ ಮೋದಿಯ ಆಡಳಿತದಲ್ಲಿ ರಕ್ಷಣಾ ಖಾತೆಯ ಸಚಿವರಾಗಿ ಸಮರ್ಥವಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಇತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೂಗಿಗೆ ಪೈಪ್ ಅಳವಡಿಸಿಕೊಂಡಿದ್ದರೂ ಕೂಡ ಬಜೆಟ್ ಅಧಿವೇಶದಲ್ಲಿ ಭಾಗವಹಿಸಿ ಬಜೆಟ್ ಮಂಡನೆ ಮಾಡಿ ಎಲ್ಲರ ಗಮನ ಸೆಳೆದಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.