ಲೋಕಸಭಾ ಚುನಾವಣೆ: ಅಬಕಾರಿ ಅಕ್ರಮಗಳ ತಡೆಗೆ ಜಿಲ್ಲಾ ಮಟ್ಟದಲ್ಲಿ ತಂಡಗಳ ರಚನೆ

ಕಾರವಾರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ತಾಲ್ಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ತಂಡಗಳನ್ನು ರಚಿಸಲಾಗಿದೆ ಎಂದು ಅಬಕಾರಿ ಜಿಲ್ಲಾ ಅಧಿಕಾರಿ ಎಲ್.ಎ. ಮಂಜುನಾಥ ಆದೇಶಿಸಿದ್ದಾರೆ.

‘ಚುನಾವಣೆ ಸಂದರ್ಭದಲ್ಲಿ ಮದ್ಯ, ಫೆನ್ನಿ, ಕಳ್ಳಭಟ್ಟಿ, ನಕಲಿ ಸಾರಾಯಿಯನ್ನು ಅನಧಿಕೃತವಾಗಿ ದಾಸ್ತಾನು ಮಾಡಿ ವಿತರಿಸಲಾಗುತ್ತದೆ. ಇಂಥ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಚುನಾವಣೆಯ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧದ ಕರ್ತವ್ಯ ನಿರ್ವಹಿಸುವ ಸಲುವಾಗಿ ದಿನದ 24 ಗಂಟೆಯೂ ಕಾರ್ಯಾಚರಿಸುವ ತಂಡಗಳನ್ನು ರಚಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಸಾರ್ವಜನಿಕರು ಯಾವುದೇ ರೀತಿಯ ಮದ್ಯದ ಅನಧಿಕೃತ ದಾಸ್ತಾನು, ಸಾಗಾಟ, ಮಾರಾಟ, ತಯಾರಿಕೆಗೆ ಸಂಬಂಧಿಸಿದ ವ್ಯವಹಾರಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ಸಲ್ಲಿಸಬೇಕು’ ಎಂದು ಮನವಿ ಮಾಡಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.