ಸ್ವರ್ಣವಲ್ಲೀಯಲ್ಲಿ ಮಾ.19ಕ್ಕೆ ಶ್ರೀಜಯೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಆರಾಧನಾ ಮಹೋತ್ಸವ

ಶಿರಸಿ: ಕಾಂಚಿ ಕಾಮಕೋಟಿಯ ಬ್ರಹ್ಮೀಭೂತ ಶ್ರೀಜಯೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಆರಾಧನಾ ಮಹೋತ್ಸವ ಮಾ.19ಕ್ಕೆ ತಾಲೂಕಿನ ಶ್ರೀಸ್ವರ್ಣವಲ್ಲಿ ಮಹಾಸಂಸ್ಥಾನದಲ್ಲಿ ನಡೆಯಲಿದೆ.

ಆರಾಧನಾ ಮಹೋತ್ಸವವನ್ನು ಆರಾಧನಾ ವಿಧಿ ವಿಧಾನಗಳಂತೆ ನಡೆಸಲಾಗುತ್ತಿದೆ. ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಶ್ರೀ ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ಸಾನ್ನಿಧ್ಯ ನೀಡಲಿದ್ದಾರೆ.

1992ರಲ್ಲಿ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಜಿಗಳಿಗೆ ಸನ್ಯಾಸ ದೀಕ್ಷೆ ನೀಡಿದ್ದ ಶ್ರೀಜಯೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳ ಪುಣ್ಯ ಸ್ಮರಣೆಯ ಕಾರ್ಯಕ್ರಮ ಸ್ವರ್ಣವಲ್ಲೀ ಮಠದಲ್ಲಿ ಕೂಡ ನಡೆಯುತ್ತಿರುವದು ವಿಶೇಷವಾಗಿದೆ. ಇಲ್ಲಿ ನಡೆಯಲಿರುವ ಆರಾಧನಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸುವಂತೆ ಶ್ರೀಮಠದ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.