ಲೋಕಸಭಾ ಚುನಾವಣೆ: ಬ್ಯಾಂಕ್ ವಹಿವಾಟಿನ ಮೇಲೆ ನಿಗಾ ಇಡಿ: ಜಿಲ್ಲಾಧಿಕಾರಿ ಸೂಚನೆ

ಕಾರವಾರ: ಮುಂಬರುವ ಲೋಕಸಭಾ ಚುನಾವಣೆ- 2019ರ ಅಂಗವಾಗಿ ಎಲ್ಲಾ ಬ್ಯಾಂಕ್ ಅಧಿಕಾರಿಗಳು ಬ್ಯಾಂಕ್ ವಹಿವಾಟಿನ ಮೇಲೆ ನಿಗಾವಹಿಸಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಲೋಕಸಭಾ ಚುನಾವಣೆ ಪ್ರಕ್ರಿಯೆಗಳನ್ನು ಸುಗಮವಾಗಿ ನಡೆಸಲು ನೀತಿ ಸಂಹಿತೆ ಕ್ಯಾಶ್ ಸೀಜರ್ ಸಮಿತಿ ರಚಿಸಲಾಗಿದೆ, ಇದಕ್ಕೆ ಪೂರಕವಾಗಿ ಎಲ್ಲಾ ಬ್ಯಾಂಕಗಳು ಬ್ಯಾಂಕ್ ವಹಿವಾಟಿನ ಮೇಲೆ ನಿಗಾ ವಹಿಸಿ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಯಾವ ಖಾತೆಯಲ್ಲಿ ಒಂದು ಲಕ್ಷಕಿಂತ ಹೆಚ್ಚಿನ ವಹಿವಾಟುವಾಗುತ್ತದೆಯೋ ಅಂತಹ ಖಾತೆಯ ಬಗ್ಗೆ ಕುಲಕುಂಶವಾಗಿ ತಿಳಿಯಬೇಕು. ಬ್ಯಾಂಕ್ ಅಧಿಕಾರಿಗಳಿಗೆ ತಮ್ಮ ಗ್ರಾಹಕರ ವ್ಯವಹಾರದ ಬಗ್ಗೆ ಚೆನ್ನಾಗಿ ತಿಳಿದಿರುತ್ತದೆ. ಇದು ಚುನಾವಣಾ ಹಣ ಅಥವಾ ವ್ಯವಹಾರಿಕದ್ದಾಗಿರುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದಾಗಿರುವದರಿಂದ ಚುನಾವಣಾ ಲೆಕ್ಕ ನೋಡಲ್ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ತಿಳಿಸಿದರು.

ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಿರಲು, ವಿವಿಧ ಬ್ಯಾಂಕ್ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಯಾವುದೇ ಲೋಪಗಳಿಗೆ ಅವಕಾಶ ನೀಡದೇ ಹಾಗೂ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ತೋರದೇ ಎಲ್ಲ ಅಧಿಕಾರಿ-ಸಿಬ್ಬಂದಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಮ್. ರೋಶನ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಸಂಗೀತಾ ಭಟ್ ಸೇರಿದಂತೆ ವಿವಿಧ ಬ್ಯಾಂಕ್ ಅಧಿಕಾರಿಗಳು ಇದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.