ವಾಣಿಜ್ಯ ವಿಭಾಗಲ್ಲಿ 100 ಫಲಿತಾಂಶ ದಾಖಲಿಸಿದ ಸರಸ್ವತಿ ಪದವಿ ಪೂರ್ವ ಕಾಲೇಜು

ಕುಮಟಾ: ಕೊಂಕಣ ಎಜ್ಯುಕೇಶನ್ ಟ್ರಸ್ಟ್‍ನ ಸರಸ್ವತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು 100 ಶೇಕಡಾ ಫಲಿತಾಂಶ ದಾಖಲಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಮಾನಸ ಪಂಡಿತ ಶೇ 96.66, ಯೋಗಿತಾ ತಾಂಡೇಲ ಶೇ 94.17, ದೀಪಕ ಕಿಣಿ ಶೇ 93.16, ಅಂಕಗಳಿಸಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಟ್ಟು 12 ವಿದ್ಯಾರ್ಥಿಗಳಲ್ಲಿ 06 ವಿದ್ಯಾರ್ಥಿಗಳು 85ಕ್ಕಿಂತ ಅಧಿಕ ಅಂಕಗಳಿಸಿದರೆ, 05 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಪಾಸಾಗಿರುತ್ತಾರೆ. ಅಲ್ಲದೇ ವ್ಯವಹಾರ ಅಧ್ಯಯನದಲ್ಲಿ ಇಬ್ಬರು ಮತ್ತು ಲೆಕ್ಕಶಾಸ್ತ್ರದಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ 90% ಫಲಿತಾಂಶ ದಾಖಲಾಗಿಸಿ ವಿ. ಅನ್ವಿತ ಶೇ 92.16, ವೈಷ್ಣವಿ ನಾಯಕ ಶೇ. 91.66, ಅಂಕಿತ ನಾಡಕರ್ಣಿ ಶೇ. 90.33, ಅಂಕಗಳಿಸಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಟ್ಟೂ 20 ವಿದ್ಯಾರ್ಥಿಗಳಲ್ಲಿ 05 ವಿದ್ಯಾರ್ಥಿಗಳು ಶೇಕಡಾ 85ಕ್ಕಿಂತ ಅಧಿಕ ಅಂಕಗಳಿಸಿದರೆ, 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಉತ್ರ್ತೀಣರಾಗಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕ ವೃಂದದವರು ಮತ್ತು ಸಂಸ್ಥೆಯ ಅಧ್ಯಕ್ಷರು ಮತ್ತು ವಿಶ್ವಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.