ಕೆಲಸ ಮಾಡದವರು ಈಗ ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ: ಬಸವರಾಜ್ ಹೊರಟ್ಟಿ

ಕಾರವಾರ:ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಜನತೆ ಆರಿಸಿ ಕಳಿಸಿದ ಬಿಜೆಪಿ ಸಂಸದರು ಎಲ್ಲೂ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಈ ಕಾರಣದಿಂದಾಗಿ ಅವರಿಗ ಸೋಲುವ ಭಯದಿಂದ ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಟೀಕೆ ಮಾಡಿದರು.

ಉತ್ತರ ಕನ್ನಡ ಜಿಲ್ಲೆಯ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಒಗ್ಗಟ್ಟಿನಿಂದಾಗಿದೆ. ಬಿಜೆಪಿಗೆ ಈ ಬಾರಿ ಗೆಲುವು ಸುಲಭವಲ್ಲ ಎಂದು ವಾಗ್ದಾಳಿ ಮಾಡಿದರು.

ಕಳೆದ ಬಾರಿಯ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಹಳಷ್ಟು ವ್ಯತ್ಯಾಸವಿದೆ. ಅಂದು ಎಲ್ಲ ಪಕ್ಷಗಳು ಪ್ರತ್ಯೇಕವಾಗಿ ಚುನಾವಣೆ ಎದುರಿಸಿದ್ದವು. ಆದರೆ ಈ ಬಾರಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸಾಧಿಸಿ ಒಗ್ಗಟ್ಟಿನಿಂದ ಕಣಕ್ಕಿಳಿದಿವೆ. ಹೀಗಾಗಿ ಬಿಜೆಪಿ ಹಾಗೂ ಮೈತ್ರಿ ಅಭ್ಯರ್ಥಿಗಳ ನಡುವೆ ಪ್ರಬಲ ಪೈಪೋಟಿ ನಡೆಯಲಿದೆ. ಜನತೆ ಜೆಡಿಎಸ್-ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಮೈತ್ರಿ ಬಳಗ ರಾಜ್ಯಯದಲ್ಲಿ 18ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಇನ್ನು ಪ್ರಾರಂಭದಲ್ಲಿ ಜಿಲ್ಲೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಟಿಕೇಟ್ ಸಂಬಂಧ ಭಿನ್ನಾಭಿಪ್ರಾಯ ಇತ್ತಾದರೂ ಈಗ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದಾರೆ. ಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ಮೇಲೆ ಬಹಳ ಜವಾಬ್ದಾರಿ ಇದೆ. ಪ್ರಾರಂಭದಲ್ಲಿ ಮುನಿಸಿತ್ತಾದರೂ ಈಗ ಸಮಾಧಾನಗೊಂಡಿದ್ದಾರೆ. ಅವರು ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆದ್ದರೂ ಅಥವಾ ಸೋತರೂ ಅವರೇ ಹೊಣೆಗಾರರಾಗಲಿದ್ದಾರೆ ಎಂದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.