ಕಾರು- ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ


ಕುಮಟಾ: ತಾಲೂಕಿನ ಮಾನೀರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

ಗಾಯಗೊಂಡಿರುವ ಬೈಕ್ ಸವಾರ ಮಿರ್ಜಾನ್ ನಿವಾಸಿ ಗಣೇಶ ಲಿಂಗಪ್ಪ ಪಟಗಾರ (26) ಎಂದು ಗುರುತಿಸಲಾಗಿದೆ. ಗಾಯಾಳುವನ್ನು ತುರ್ತು ಚಿಕಿತ್ಸೆಗೆ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಚಿನ್ಮಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Categories: ಚಿತ್ರ ಸುದ್ದಿ

Leave A Reply

Your email address will not be published.