ಉಪ ಚುನಾವಣೆ: ಜಿಲ್ಲೆಯಲ್ಲಿ ಮದ್ಯ ನಿಷೇಧ

ಕಾರವಾರ: ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಒಟ್ಟು 6 ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಮೇ. 13 ರ ಮಧ್ಯ ರಾತ್ರಿ 12 ಗಂಟೆಯಿಂದ ಮೇ 31 ರ ಮಧ್ಯ ರಾತ್ರಿ 12 ಗಂಟೆಯವರೆಗೆ ಮದ್ಯದ ಅಂಗಡಿಗಳನ್ನು ಹಾಗೂ ಮದ್ಯ ತಯಾರಿಕಾ ಘಟಕಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಅವರು ಆದೇಶ ಹೊರಡಿಸಿದ್ದಾರೆ.

ಅಂಕೋಲಾ ತಾಲೂಕಿನ ಹೊನ್ನೆಬೈಲ್, ಕುಮಟಾ ತಾಲೂಕಿನ ಗೋಕರ್ಣ (ತದಡಿ ಬೆಲೆಖಾನ), ಹೊನ್ನಾವರ ತಾಲೂಕಿನ ಹಡಿನಬಾಳ, ಶಿರಸಿ ತಾಲೂಕಿನ ಬಿಸಲಕೊಪ್ಪ (ಮಳಲಗಾಂವ) ಇಸಳೂರು (ಚಿಪಗಿ), ಗುಡ್ನಾಪುರ (ಅಜ್ಜರಣಿ) ಸಿದ್ದಾಪುರ ತಾಲೂಕಿನ ತಾರೆಹಳ್ಳಿ (ಕಾನಸೂರು), ಜೋಯಿಡಾ ತಾಲೂಕಿನ ಪ್ರಧಾನಿ ಗ್ರಾಮ ಪಂಚಾಯತ್‍ಗಳಲ್ಲಿ ಉಪ ಚುನಾವಣೆ ನಡೆಯಲಿರುವುದರಿಂದ ಮದ್ಯ ಮಾರಾಟವನ್ನು ನಿಷೇದಿಸಲಾಗಿದೆ.

ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಮದ್ಯವನ್ನು ಸ್ವಾಧೀನದಲ್ಲಿಟ್ಟುಕೊಂಡಿರುವುದು ಅಥವಾ ಮದ್ಯವನ್ನು ಸೇವಿಸಿ ಬೀದಿಯಲ್ಲಿ ರಂಪಾಟ ಮಾಡುತ್ತಿರುವುದು ಕಂಡು ಬಂದರೆ ಮುನ್ನೆಚ್ಚರಿಕೆ ಕ್ರಮವಾಗಿ ಚುನಾವಣೆ ಮುಕ್ತಾಯವಾಗುವರೆಗೆ ಅಂತವರನ್ನು ಕಸ್ಟಡಿಯಲ್ಲಿ ಇಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.