ಮುರಾರ್ಜಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ

ಕಾರವಾರ: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮುಂಡಗೋಡ ತಾಲೂಕಿನ ಪಾಳಾ ಗ್ರಾಮದಲ್ಲಿ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಮುರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪ್ರಾರಂಭಿಸಲಾಗಿದ್ದು ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಕನ್ನಡ, ಉರ್ದು, ಆಂಗ್ಲ್ ಭಾಷೆ, ಸಮಾಜ ವಿಜ್ಞಾನ, ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ತಲಾ 1 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಟಿ.ಇ.ಟಿ ಆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಹಾಗೂ ನೇಮಕಾತಿ ಹೊಂದಿದ ಅತಿಥಿ ಶಿಕ್ಷಕರಿಗೆ ಸರ್ಕಾರದ ನಿಯಮದಂತೆ ಗೌರವಧನವನ್ನು ಪಾವತಿಸಲಾಗುವುದು. ಅರ್ಜಿ ಸಲ್ಲಿಸ ಬಯಸುವರು, ತಾಲೂಕಾ ವಿಸ್ತರಣಾಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮುಂಡಗೋಡ ಅಥವಾ ಜಿಲ್ಲಾ ಅಲ್ಪ ಸಂಖ್ಯಾತಕಲ್ಯಾಣ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ತೇಲಿ ರಾಮಜಿ ರಸ್ತೆ, ಕಾರವಾರ ಉ.ಕ. ಜಿಲ್ಲೆ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ : 08382-220336 ಅಥವಾ ತಾಲೂಕು ಕಚೇರಿ ದೂರವಾಣಿ ಸಂಖ್ಯೆ : – 08301-222232 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪ ಸಂಖ್ಯಾತ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.

 

Categories: ಜಿಲ್ಲಾ ಸುದ್ದಿ

Leave A Reply

Your email address will not be published.