ಶೈಕ್ಷಣಿಕ ಸಾಲ ಮಂಜೂರಾತಿಗೆ ಅರ್ಜಿ ಆಹ್ವಾನ

ಕಾರವಾರ: ಕರ್ನಾಟಕ ಪರೀಕ್ಷಾ ಪಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪ್ರವೇಶ ಪಡೆದು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2019-20ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ವಾರ್ಷಿಕವಾಗಿ ಗರಿಷ್ಠ ರೂ.1.00 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ. 2019-20ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ಸಿ.ಇ.ಟಿ ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ-3ಬಿ ಗೆ ಸೇರಿರುವ ವಿದ್ಯಾರ್ಥಿಗಳ ಮತ್ತು ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳ ಮಿತಿಯಲ್ಲಿರಬೇಕು.

ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್‍ಸೈಟ್ www.karnataka.gov.in/dbcdc ನಲ್ಲಿ ಲಾಗಿನ್ ಆಗಿ ವೆಬ್‍ಸೈಟ್‍ನಲ್ಲಿ ಲಭ್ಯವಿರುವ Username- arivuPassward– [email protected]  ನ್ನು ನಮೂದಿಸಿ ಅರ್ಜಿಯನ್ನು ಆನ್‍ಲೈನ್‍ಲ್ಲಿ ಭರ್ತಿ ಮಾಡಬೇಕು ಎಂದು ತಿಳಿಸಲಾಗಿದೆ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಆಧಾರ್‍ಕಾರ್ಡ್/ಚುನಾವಣಾ ಗುರುತಿನ ಚೀಟಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಸಿ.ಇ.ಟಿ ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅರ್ಜಿಯೊಂದಿಗೆ ಆನ್‍ಲೈನ್‍ನಲ್ಲಿ ಮೇ 24 ರೊಳಗೆ ಸಲ್ಲಿಸಬೇಕು.

ವಿದ್ಯಾರ್ಥಿಯು ಒಂದೇ ಜಿಲ್ಲೆಯಲ್ಲಿ ಅರ್ಜಿಯನ್ನು ಆನ್‍ಲೈನ್‍ನಲ್ಲಿ ಸಲ್ಲಿಸುವುದು. ಹೆಚ್ಚಿನ ಜಿಲ್ಲೆಯಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗೆ ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಾಸಿಂ ಮಂಜಿಲ್, 2ನೇ ಮಹಡಿ, ಖಾದಿ ಮುಲ್ಲಾ ರಸ್ತೆ, ಹೈ ಚರ್ಚ್ ಹತ್ತಿರ ಕಾರವಾರ ದೂರವಾಣಿ ಸಂಖ್ಯೆ 08382-223229 ಸಂಪರ್ಕಿಸಬಹುದು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.