ತಾಲೂಕಾ ಪಂಚಾಯತ್ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನಾಚರಣೆ

ಶಿರಸಿ: ಮಕ್ಕಳ ಕಲ್ಯಾಣ ಸಮಿತಿ, ಸ್ಕೋಡ್ವೆಕಸ್ ಸಂಸ್ಥೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದಲ್ಲಿ ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನಾಚರಣೆ ನಡೆಯಿತು.

ಇಲ್ಲಿನ ತಾಲೂಕಾ ಪಂಚಾಯ್ತಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ನಗರಸಭೆ ಪೌರಾಯುಕ್ತೆ ಬಿ.ಎಂ.ಅಶ್ವಿನಿ ಕಾರ್ಯಕ್ರಮ ಉದ್ಘಾಟಿಸಿ, ಯುವಜನತೆ ಹಾಗೂ ಮಕ್ಕಳ ಸಂಖ್ಯೆ ಹೆಚ್ಚಿರುವ ಭಾರತದಲ್ಲಿ ಮಕ್ಕಳ ಮೇಲೆ ಆಗಾಗ ದೌರ್ಜನ್ಯಗಳು ನಡೆಯುತ್ತಲೇ ಇವೆ. ಮಕ್ಕಳ ಮೇಲಾಗುತ್ತಿರುವ ಅನ್ಯಾಯದ ವಿರುದ್ಧ ಸಮಾಜ ಹೋರಾಟ ನಡೆಸಬೇಕಿದೆ. ಮಕ್ಕಳ ಮುಗ್ಧತೆ ಹಾಗೂ ಅಸಹಾಯಕತೆಯನ್ನು ದುರುಪಯೋಗ ಪಡಿಸಿಕೊಂಡು ದೌರ್ಜನ್ಯ ನಡೆಸಲಾಗುತ್ತಿದೆ. ಮಕ್ಕಳ ಹಕ್ಕುಗಳ ರಕ್ಷಣೆಗೆ ನಾವೆಲ್ಲರೂ ಮುಂದಾಗಬೇಕಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ನಾಯ್ಕ ಮಾತನಾಡಿ, ಮಕ್ಕಳ ಮೇಲೆ ತುಂಬಾ ದೌರ್ಜನ್ಯ ನಡೆಯುತ್ತಿವೆ. ಬಾಲಕಾರ್ಮಿಕರನ್ನಾಗಿ ಅನೇಕ ಕಡೆ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವ ದೂರುಗಳಿದ್ದು, ಇದನ್ನು ತಪ್ಪಿಸಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಅನಿತಾ ಪರ್ವತಿಕರ್ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ನಾಯ್ಕ, ಕಾರ್ಮಿಕ ನಿರೀಕ್ಷಕ ಬಿ.ಎನ್.ಬೆಟಗೇರಿ ಉಪಸ್ಥಿತರಿದ್ದರು. ಸ್ಕೋಡ್ವೆಾಸ್ ಸಂಸ್ಥೆಯ ರಿಯಾಜ್ ಸಾಗರ್ ನಿರೂಪಿಸಿದರು

Categories: ಜಿಲ್ಲಾ ಸುದ್ದಿ

Leave A Reply

Your email address will not be published.