ಜಾತ್ರೆಯಲ್ಲಿ ಹಚ್ಚೆ ಹಾಕುವುದಕ್ಕೆ ನಿರ್ಬಂಧ: ಜಿಲ್ಲಾಧಿಕಾರಿ ಸೂಚನೆ

ಕಾರವಾರ: ಜಾತ್ರೆ ಮತ್ತು ಉತ್ಸವಗಳಲ್ಲಿ ಸಂಸ್ಕರಿಸದ ಸೂಜಿಯಿಂದ ಒಬ್ಬರಾದಂತೆ ಮತ್ತೊಬ್ಬರಿಗೆ ಒಂದೇ ಸೂಜಿಯಲ್ಲಿ ಹಚ್ಚೆ ಹಾಕುವುದು ಸೋಂಕಿಗೆ ಕಾರಣವಾಗುವ ಹಿನ್ನೆಲ್ಲೆಯಲ್ಲಿ ಹಚ್ಚೆ ಹಾಕುವುದನ್ನು ಜಿಲ್ಲೆಯಲ್ಲಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಹರೀಶ್‍ಕುಮಾರ್ ಕೆ. ಆದೇಶಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಚ್ಚೆ ಹಾಕಿಸಿಕೊಳ್ಳುವುದು ಯುವಜನರಲ್ಲಿ ಆಸಕ್ತಿ ಹೆಚ್ಚಾಗುತ್ತಿರುವುದರಿಂದ ಎಚ್‍ಐವಿಯಂತಹ ಸೋಂಕಿಗೂ ಇದು ಕಾರಣವಾಗಬಹುದಾಗಿದೆ. ಎಚ್‍ಐವಿ ಸೋಂಕು ನಿವಾರಣಾ ಪ್ರಾಧಿಕಾರದ ಮುಖ್ಯಸ್ಥರು ಹಚ್ಚೆ ಹಾಕುವುದನ್ನು ನಿಷೇಧಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಜಾತ್ರೆ, ಉತ್ಸವ ಅಥವಾ ಇನ್ನಾವುದೇ ಕಡೆಗಳಲ್ಲಿ ಹಚ್ಚೆ ಹಾಕುವುದನ್ನು ನಿರ್ಬಂಧಿಸಲಾಗಿದೆ.

ಕಾನೂನು ಬಾಹಿರವಾಗಿ ಹಚ್ಚೆ ಹಾಕುವುದು ಕಂಡುಬಂದನ್ನು ಅವರ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ವಹಿಸುವಂತೆ ಸಂಬಂಧಿಸಿದ ಇಲಾಖೆಗೆ ಸೂಚಿಸಿರುವುದಾಗಿ ಹಾಗೂ ಜಾತ್ರೆ ಮತ್ತು ಉತ್ಸವ ಸಮಿತಿಯವರು ಈ ಬಗ್ಗೆ ಎಚ್ಚರ ವಹಿಸುವಂತೆ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.