ರುದ್ರದೇವರ ಮಠದಲ್ಲಿ ನೂತನ ಅನುಭವ ಮಂಟಪ ಉದ್ಘಾಟನೆ

ಶಿರಸಿ: ಇಲ್ಲಿನ ‌ರುದ್ರದೇವರ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಅನುಭವ ಮಂಟಪವನ್ನು ಚಿತ್ರದುರ್ಗ ಬ್ರಹನ್ಮಠದ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ ಶುಕ್ರವಾರ ಸಂಜೆ ಲೋಕಾರ್ಪಣೆಗೊಳಿಸಿದರು.

ನಂತರ ಮಾತನಾಡಿದ ಅವರು, ಬಸವಣ್ಣನವರ ವಿಚಾರ ಧಾರೆಯನ್ನು ಶಾಖಾ ಮಠಗಳ ಮೂಲಕ, ಬಸವ ಕೇಂದ್ರಗಳ ಮೂಲಕ ಹಳ್ಳಿಯಿಂದ ದಿಲ್ಲಿಯವರೆಗೂ ನಾವು ಪ್ರಚಾರ ಮಾಡುತ್ತಿದ್ದೇವೆ. ಅದನ್ನು ಮುಂದುವರೆಸುವ ಜೊತೆಗೆ ಇನ್ನಷ್ಟು ಹೆಚ್ಚು ಜನರಿಗೆ ತಲುಪುವಂತೆ ಮಾಡುತ್ತೇವೆ ಎಂದರು.

Categories: ಚಿತ್ರ ಸುದ್ದಿ

Leave A Reply

Your email address will not be published.