ಚಂಡಮಾರುತ ಭೀತಿ: ಮುಂಜಾಗ್ರತೆಗೆ ಜಿಲ್ಲಾಡಳಿತ ಸೂಚನೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗೃತಾ ಕ್ರಮ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಈ ಸಾಲಿನ ಮುಂಗಾರುಮಳೆ ಕೇರಳಕ್ಕೆ ಜೂ.8 ರಂದು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಪ್ರವೇಶಿಸಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಜೂ.14 ರಂದು ಅದು ಗುಜರಾತ್ ರಾಜ್ಯವನ್ನು ತಲುಪಲಿದೆ. ಇದರಿಂದ ಪಶ್ಚಿಮ ಕರಾವಳಿ ಭಾಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ಬೀಸಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್ ತಿಳಿಸಿದ್ದಾರೆ.

ತುರ್ತು ಸೇವೆಗಳಿಗಾಗಿ ಉತ್ತರಕನ್ನಡ ಕಂಟ್ರೋಲ್ ರೂಮ್ ಉಚಿತ ಕರೆ ಸಂಖ್ಯೆ 1077 ಅಥವಾ ವಾಟ್ಸ್‍ಆಪ್ ಸಂಖ್ಯೆ 9483511015 ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.