ಜೂ. 15ಕ್ಕೆ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಕಾರವಾರ: ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ಅವರು ಜೂ. 15 ರಂದು ಜಿಲ್ಲೆಯಲ್ಲಿ ಪ್ರವಾಸಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಕಾರವಾರದಲ್ಲಿ ಜೂ. 15 ರಂದು ಬೆಳಗ್ಗೆ 9.30 ಕ್ಕೆ ಸಾರ್ವಜನಿಕರನ್ನು ಭೇಟಿ ಮಾಡುವರು. 10.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಖನಿಜ ಪ್ರತಿಷ್ಟಾನ ಸಭೆ, 11 ಗಂಟೆಗೆ ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆ, 2.30ಕ್ಕೆ ಕಾಳಿ-ಕೈಗಾ ಪುನರ್ ವಸತಿ ಪರಿಶೀಲನಾ ಸಭೆ, 3.30ಕ್ಕೆ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆ, ಸಂಜೆ 4.30ಕ್ಕೆ ಉತ್ತರಕನ್ನಡ ಜಿಲ್ಲಾ ಪ್ರವಾಸೋದ್ಯಮ ಸ್ಥಳಗಳ ಅಭಿವೃದ್ಧಿ ಮತ್ತು ಸಂರಕ್ಷಣಾ ಸಮಿತಿಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುವರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.