ಜೂ. 15 ರಂದು ಹೆಸ್ಕಾಂ ಗ್ರಾಹಕರ ಸಭೆ

ಕಾರವಾರ: ಇಲ್ಲಿನ ಉಪವಿಭಾಗ ವ್ಯಾಪ್ತಿಯ ಹೆಸ್ಕಾಂ ಗ್ರಾಹಕರ ಅದಾಲತ್, ಕುಂದು ಕೊರತೆ ಸಭೆಯನ್ನು ಜೂ. 15 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಗ್ರಾಹಕರೊಂದಿಗೆ ಸಂವಾದ ಸಭೆಯನ್ನು ಮಧ್ಯಾಹ್ನ 3.30ರಿಂದ ಸಂಜೆ 5.30 ರವರೆಗೆ ಕಾರ್ಯ ಮತ್ತು ಪಾಲನಾ ಉಪವಿಭಾಗ ಕಾರವಾರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಹೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ವಿನಂತಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.