ವಿಶ್ವಕಪ್ 2019: ಇಂದು ಭಾರತ v/s ನ್ಯೂಜಿಲೆಂಡ್ ಸೆಣಸಾಟ


ಕಾರವಾರ: ಐಸಿಸಿ ವಿಶ್ವಕಪ್ 2019 ರ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

ವಿಶ್ವಕಪ್ ನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಈವರೆಗೆ ಆಡಿರುವ ಮೂರು ಪಂದ್ಯಗಳಲ್ಲೂ ಗೆದ್ದು ಬೀಗಿದೆ. ಭಾರತ ತಂಡ ಈ ವರೆಡಗೆ ತಾನಾಡಿದ ಎರಡೂ ಪಂದ್ಯಗಳಲ್ಲಿ ಭರ್ಜರಿ ಗೆಲವು ಸಾಧಿಸಿದ್ದು, ಇಂದೂ ಅದೇ ವಿಶ್ವಾಸದಲ್ಲಿದೆ.

ಗಾಯಗೊಂಡಿರುವ ಹಿನ್ನೆಲೆಯಲ್ಲಿ ಶಿಖರ್ ಧವನ್ ಕನಿಷ್ಠ ಮೂರು ಪಂದ್ಯಗಳಿಂದ ಹೊರಗುಳಿಯುವಂತಾಗಿದೆ. ಅವರ ಜಾಗದಲ್ಲಿ ಕೆ.ಎಲ್. ರಾಹುಲ್ ಆರಂಭಿಕನಾಗಿ ಆಡುವುದು ಬಹುತೇಕ ಖಚಿತಗೊಂಡಿದ್ದು, ಹಾಗೆಯೇ ನಾಲ್ಕನೇ ಕ್ರಮಾಂಕಕ್ಕೆ ವಿಜಯ್ ಶಂಕರ್ ಮತ್ತು ದಿನೇಶ್ ಕಾರ್ತಿಕ್ ನಡುವೆ ಪೈಪೋಟಿ ಏರ್ಪಟ್ಟಿದೆ.

Categories: ಸಿನಿ-ಕ್ರೀಡೆ

Leave A Reply

Your email address will not be published.