ರೈತ ಬಾಂಧವರಿಂದ ಅರ್ಜಿ ಆಹ್ವಾನ

ಕಾರವಾರ: ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಕಿಸಾನ ಸಮ್ಮಾನ ನಿಧಿ ಯೋಜನೆಯಡಿ ಪ್ರತಿ ರೈತ ಕುಟುಂಕ್ಕೆ ಒಂದು ವರ್ಷಕ್ಕೆ ರೂ. 6 ಸಾವಿರಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಒಟ್ಟು ಮೂರು ಸಮಾನ ಕಂತುಗಳಲ್ಲಿ ನೀಡುವ ಕಾರ್ಯಕ್ರಮ ಮುಂದೂವರಿಸಲಾಗಿದೆ.

ರೈತರು ತಮ್ಮ ಜಮೀನಿನ ಪಹಣಿಪತ್ರ, ಆಧಾರ ಕಾರ್ಡ್, ಭಾವಚಿತ್ರ, ಬ್ಯಾಂಕ್ ಖಾತೆ ವಿವರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಜಾತಿ ಪ್ರಮಾಣ ಪತ್ರ ದಾಖಲಾತಿಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರ, ಬಾಪೂಜಿ ಸೇವಾ ಕೇಂದ್ರ, ಅಟಲಜೀ ಜನಸ್ನೇಹಿ ಕೇಂದ್ರ ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಇವುಗಳಲ್ಲಿ ಯಾವುದಾದರೊಂದರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಯ ಲಾಭವನ್ನು ಜಿಲ್ಲೆಯ ಎಲ್ಲ ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.