ಐಸಿಸಿ ವಿಶ್ವಕಪ್ 2019: ಇಂದು ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ ತಂಡ ಮುಖಾಮುಖಿ

ಸ್ಪೋರ್ಟ್ಸ್: ಐಸಿಸಿ ವಿಶ್ವಕಪ್ 2019 ಟೂರ್ನಿಯ ಬುಧವಾರದ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.

ಬರ್ಮಿಂಗ್ ಹ್ಯಾಮ್ ಮೈದಾನದಲ್ಲಿ ಇಂದು ಇವೆರಡು ತಂಡ ಮುಖಾ ಮುಖಿಯಾಗಲಿದೆ. ದಕ್ಷಿಣ ಆಫ್ರಿಕಾ ತಂಡ ಆಡಿರುವ 5 ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆದ್ದು, ಮತ್ತೊಂದು ಪಂದ್ಯ ರದ್ದಾಗಿ ಮೂರು ಪಂದ್ಯ ಸೋತು, ಇಂದಿನ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಇಂದಿನ ಪಂದ್ಯದಲ್ಲಿ ದ.ಆಫ್ರಿಕಾ ತಂಡ ಸೋತರೆ ಬಹುತೇಕ ವಿಶ್ವಕಪ್ ಹಾದಿ ಅಂತ್ಯವಾಗುವ ಸಾಧ್ಯತೆ ಇದೆ.

ಇನ್ನು ನ್ಯೂಜಿಲೆಂಡ್ ತಂಡ ಆಡಿರುವ 4 ಪಂದ್ಯಗಳಲ್ಲಿ ಒಂದು ಪಂದ್ಯ ರದ್ದಾಗಿ ಮೂರನ್ನು ಗೆದ್ದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಕಿವೀಸ್ ಪರ ಮ್ಯಾಟ್ ಹೆನ್ರಿ, ಟ್ರೆಂಟ್ ಬೋಲ್ಸ್, ಲ್ಯೂಕಿ ಫರ್ಗುಸನ್, ಜೇಮ್ಸ್ ನಿಶಾಮ್ ಬೌಲಿಂಗ್ ನಲ್ಲಿ ಮಿಂಚುತ್ತಿದ್ದು, ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ.

Categories: ಸಿನಿ-ಕ್ರೀಡೆ

Leave A Reply

Your email address will not be published.